ಡಾ.ಬಾಬು ಜಗಜೀವನ್‍ರಾಮ್ ಭಾವಚಿತ್ರದೊಂದಿಗೆ ಅದ್ಧೂರಿ ಮೆರವಣಿಗೆ

News Desk

ಚಂದ್ರಳ್ಳಿ ನ್ಯೂಸ್, ಚಿತ್ರದುರ್ಗ:
ಡಾ.ಬಾಬು ಜಗಜೀವನ್‍ರಾಮ್‍ರವರ ಜನ್ಮ ದಿನಾಚರಣೆ ಸಮಾರಂಭ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಭಾರತದ ಮಾಜಿ ಉಪಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್‍ರಾಮ್‍ರವರ 118ನೇ ಜನ್ಮ ದಿನಾಚರಣೆ ಅಂಗವಾಗಿ ಶನಿವಾರ ನಗರದಲ್ಲಿ ಡಾ.ಬಾಬು ಜಗಜೀವನ್‍ರಾಮ್ ಅವರ ಭಾವಚಿತ್ರ ಮೆರವಣಿಗೆ ವಿವಿಧ ಜಾನಪದ ಕಲಾತಂಡಗಳ ಸಮ್ಮುಖದಲ್ಲಿ ಅದ್ಧೂರಿ ಮೆರವಣಿಗೆ ನಡೆಯಿತು.

      ನಗರದ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರ ದೇಗುಲದ ಮುಂಭಾಗದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಮೆರವಣಿಗೆಗೆ ಚಾಲನೆ ನೀಡಿದರು. ನೀಲಕಂಠೇಶ್ವರ ದೇಗುಲದಿಂದ ಆರಂಭವಾದ ಮೆರವಣಿಗೆಯು ಗಾಂಧಿವೃತ್ತ, ಎಸ್‍ಬಿಐ ವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ ಅಂಬೇಡ್ಕರ್ ವೃತ್ತ, ಮದಕರಿ ನಾಯಕ ವೃತ್ತದಿಂದ ವೇದಿಕೆ ಕಾರ್ಯಕ್ರಮ ನಡೆಯುವ ನಗರದ ತರಾಸು ರಂಗಮಂದಿರದವರೆಗೆ ನಡೆಯಿತು.

      ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನ್ ಖುರೇಷಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಮುದಾಯದ ಮುಖಂಡರು, ಗಣ್ಯರು, ವಿದ್ಯಾರ್ಥಿಗಳು ಇದ್ದರು.

 

 

 

Share This Article
error: Content is protected !!
";