ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಎಲ್ಲಾ 3,514 ಕಂದಾಯ ಗ್ರಾಮಗಳಿಗೂ ಜೂನ್ ತಿಂಗಳ ಅಂತ್ಯದೊಳಗೆ ಅಂತಿಮ ಅಧಿಸೂಚನೆ ಹೊರಡಿಸಬೇಕು. ಡಿಸೆಂಬರ್‌ಅಂತ್ಯದೊಳಗೆ ಎಲ್ಲರಿಗೂ ಹಕ್ಕುಪತ್ರ ನೀಡಬೇಕು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮೂಲ ಸೌಕರ್ಯಗಳಿಂದ ವಂಚಿತರಾಗಿರುವ ಕಡು ಬಡವರಿಗೆ ಕಂದಾಯ ಗ್ರಾಮಗಳನ್ನು ರಚಿಸಿ ಶಾಶ್ವತ ಪರಿಹಾರ ನೀಡಬೇಕೆಂಬ ಉದ್ದೇಶದಿಂದಲೇ 2017ರಲ್ಲಿ ಕಾನೂನಿಗೆ ತಿದ್ದುಪಡಿ ತರಲಾಗಿತ್ತು. ಆದರೆ ಅನುಷ್ಠಾನ ಈವರೆಗೆ ಪೂರ್ಣಗೊಳ್ಳದಿರುವುದು ದುರಾದೃಷ್ಟಕರ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.