ಗ್ರೂಪ್ –ಎ ಮತ್ತು ಬಿ ವೃಂದದ ಹುದ್ದೆಗಳ ಮುಖ್ಯ ಪರೀಕ್ಷೆ ದಿನಾಂಕ ನಿಗದಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ 384 ಹುದ್ದೆಗಳಿಗೆ ಮುಖ್ಯ ಪರೀಕ್ಷೆಯನ್ನು  2025 ರ ಮೇ 3, 5 ಮತ್ತು 7 ರಂದು ನಡೆಸಲು ಮರು ನಿಗದಿ ಪಡಿಸಲಾಗಿದೆ.

ಮುಖ್ಯ ಪರೀಕ್ಷೇಯ ವೇಳಾಪಟ್ಟಿಯನ್ನು ಆಯೋಗದ ಅಂತರ್ಜಾಲ http://kpsc.kar.nic.in  ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";