ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಅಭಿವೃದ್ಧಿ ಬಗ್ಗೆ ಚರ್ಚೆ ಯಾರೊಬ್ಬರೂ ಮಾಡುತ್ತಿಲ್ಲ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿ ಪ್ರಶ್ನಿಸಿದ್ದಾರೆ.
ಹಿಂದೆ ಸಿಎಂ ಆಗಿದ್ದಾಗ 165 ಭರವಸೆ ಕೊಟ್ಟು 158 ಭರವಸೆಗಳನ್ನು ಈಡೇರಿಸಿದೆವು. ಅವು ಅಭಿವೃದ್ಧಿಯಲ್ಲವೆ ಎಂದು ಪ್ರಶ್ನಿಸಿದರು.
3 ಲಕ್ಷದ 71 ಸಾವಿರ ಕೋಟಿ ರೂಪಾಯಿಗಳಲ್ಲಿ 52 ಸಾವಿರ ಕೋಟಿ ಗ್ಯಾರಂಟಿಗಳಿಗೆ ವೆಚ್ಚ ಮಾಡುತ್ತಿದ್ದೇವೆ. ಸುಮಾರು 60 ಸಾವಿರ ಕೋಟಿ ಅಭಿವೃದ್ಧಿಗೆ ವೆಚ್ಚ ಮಾಡುತ್ತಿದ್ದೇವೆ.
ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ರಸ್ತೆ, ಸೇತುವೆ, ನಿರ್ಮಾಣಕ್ಕಾಗಿ ವೆಚ್ಚವಾಗುತ್ತಿದೆ ಇವೆಲ್ಲ ಅಭಿವೃದ್ದಿಯಲ್ಲವೇ ಎಂದರು.