ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕಿನ,ಸಾಸಲು ಹೋಬಳಿ ಕಾಮೇನಹಳ್ಳಿಯ ಪೂರ್ವ ಇತಿಹಾಸ ಹಿನ್ನೆಲೆಯ ಪ್ರಸಿದ್ಧ ಗುಟ್ಟೆ ಲಕ್ಷ್ಮೀನರಸಿಂಹ ಸ್ವಾಮಿ ಸನ್ನಿಧಿಯಲ್ಲಿ ಪ,ಥಮ ವರ್ಷದ ರಥೋತ್ಸವ ಬಹಳಷ್ಠು ಅದ್ದೂರಿಯಾಗಿ ಜರುಗಿತು.
ಲಕ್ಷ್ಮೀನರಸಿಂಹ ಸ್ವಾಮಿಯ ಉತ್ಸವ ಮೂರ್ತಿ ಹೊತ್ತ ರಥವನ್ನು ಜಯ ಘೋಷಣೆಗಳೊಂದಿಗೆ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿ, ಸ್ವಸ್ಥಾನಕ್ಕೆ ತಂದು ನಿಲ್ಲಿಸಲಾಯಿತು. ನಂತರ 12.05 ನಿಮಿಷಕ್ಕೆ ಸರಿಯಾಗಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿಯ ಜಯ ಘೋಷಣೆಗಳನ್ನು ಕೂಗುವುದರ ಮೂಲಕ ರಥವನ್ನು ಎಳೆಯಲಾಯಿತು. ಉತ್ಸವ ಮೂರ್ತಿ ಹೊತ್ತ ತೇರಿಗೆ ಭಕ್ತರು ಭಕ್ತಿಯಿಂದ ಬಾಳೆಹಣ್ಣು ದವನ ಸಮರ್ಪಿಸಿ ದನ್ಯತೆ ಮೆರೆದರು.
ದೂರದ ಊರುಗಳಿಂದ ದೇವರ ದರ್ಶನಕ್ಕೆ ಬಂದ ಭಕ್ತರಿಗೆ ಅನ್ನದಾನದ ವ್ಯವಸ್ಥೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಗುಟ್ಟೆ ಶ್ರೀ ಲಕ್ಷ್ಮೀ ನರಸಿಹ ಸ್ವಾಮಿ ರಥೋತ್ಸವ ಹಿನ್ನೆಲೆ ದೇವರಿಗೆ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಲಾಗಿತ್ತು. ವಿವಿಧ ಜಿಲ್ಲೆಗಳು, ಅಕ್ಕಪಕ್ಕದ ತಾಲೂಕುಗಳಿಂದ ಭಕ್ತ ಸಾಗರ ಹರಿದುಬಂದು ದೇವರ ದರ್ಶನ ಪಡೆದರು. ಡೊಳ್ಳು ಕುಣಿತ, ಕೀಲುಕುದುರೆ ಕುಣಿತ, ಕಂಸಾಳೆ ನೃತ್ಯ ಪ್ರದರ್ಶನಗಳು ನೋಡುಗರ ಕಣ್ಮನ ಸೆಳೆದವು.