ಆದಿಚುಂಚನಗಿರಿ ಶ್ರೀಗಳ ಆಶೀರ್ವಾದ ಪಡೆದ ಹೆಚ್.ಡಿ. ಕುಮಾರಸ್ವಾಮಿ​

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ನಗರದ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದರು.

​ಈ ಸಂದರ್ಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರನ್ನು ಭೇಟಿಯಾದ ಕುಮಾರಸ್ವಾಮಿ ಅವರು, ಶ್ರೀಗಳ ಪಾದಪೂಜೆ ನೆರವೇರಿಸಿ ಆಶೀರ್ವಾದ ಪಡೆದರು.

- Advertisement - 

​ಬೆಂಗಳೂರಿನ ವಿಜಯನಗರ ಶಾಖಾ ಮಠಕ್ಕೆ ಭೇಟಿ ನೀಡಿ ಜಗದ್ಗುರುಗಳ ಕುಶಲೋಪರಿ ವಿಚಾರಿಸಿ ಮಾರ್ಗದರ್ಶನ ಪಡೆದರು. ​ಭೇಟಿಯ ಸಮಯದಲ್ಲಿ ಕುಮಾರಸ್ವಾಮಿ ಅವರೊಂದಿಗೆ ಇತರ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

​ಸಮಾಜದ ಅಭಿವೃದ್ಧಿ ಹಾಗೂ ಪ್ರಸ್ತುತ ವಿದ್ಯಮಾನಗಳ ಕುರಿತು ಶ್ರೀಗಳೊಂದಿಗೆ ಅವರು ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ. ಮಠದ ಭೇಟಿಯ ಫೋಟೋಗಳನ್ನು ಹಂಚಿಕೊಂಡಿರುವ ಕುಮಾರಸ್ವಾಮಿ ಅವರು ಜೈ ಗುರುದೇವ್ಎಂದು ಭಕ್ತಿಪೂರ್ವಕವಾಗಿ ಸ್ಮರಿಸಿದ್ದಾರೆ.

- Advertisement - 

 

 

 

Share This Article
error: Content is protected !!
";