ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕರಿಗೆ ಅರ್ಧ ವೇತನೆ ಖಂಡನೀಯ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಳೆದ ಅಕ್ಟೋಬರ್ ನಲ್ಲಿ ಸಕಾಲಕ್ಕೆ ವೇತನ ನೀಡದ ರಾಜ್ಯ ಕಾಂಗ್ರೆಸ್ ಸರ್ಕಾರದ ಅಮಾನವೀಯ ವ್ಯವಸ್ಥೆಗೆ ಬೇಸತ್ತು ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಗ್ರಂಥಪಾಲಕಿ ಭಾಗ್ಯವತಿ ವಿಶ್ವೇಶ್ವರಯ್ಯ ಅಗ್ಗಿಮಠ ಅವರು ನೇಣಿಗೆ ಶರಣಾಗಿದ್ದರು.

ಇಂತಹ ಹೃದಯವಿದ್ರಾವಕ ಘಟನೆ ನಡೆದ ಮೇಲೂ ಎಚ್ಚೆತ್ತುಕೊಳ್ಳದ ಕರ್ನಾಟಕ ಕಾಂಗ್ರೆಸ್ ಸರ್ಕಾರ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅರಿವು ಕೇಂದ್ರಗಳ ಗ್ರಂಥಾಲಯ ಮೇಲ್ವಿಚಾರಕರಿಗೆ ಕಳೆದ ಒಂದು ವರ್ಷದಿಂದ ಅರ್ಧ ವೇತನ ನೀಡುವ ಮೂಲಕ ಅವರ ಕುಟುಂಬಗಳನ್ನು ಸಂಕಷ್ಟಕ್ಕೆ ದೂಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

- Advertisement - 

ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಪಾಪರ್ ಸರ್ಕಾರದ ದಿವಾಳಿತನಕ್ಕೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು ಸ್ವಾಮಿ? ಈ ಕೊಡಲೇ ಗ್ರಾಮ ಪಂಚಾಯಿತಿಗಳ ಗ್ರಂಥಾಲಯ ಮೇಲ್ವಿಚಾರಕರಿಗೆ ಬಾಕಿ ವೇತನ ಬಿಡುಗಡೆ ಮಾಡಿ. ಇನ್ನು ಮುಂದೆ ಸಕಾಲಕ್ಕೆ ಪೂರ್ತಿ ಸಂಬಳ ಸಿಗುವಂತೆ ಕ್ರಮ ಕೈಗೊಳ್ಳಿ ಎಂದು ಅಶೋಕ್ ತಾಕೀತು ಮಾಡಿದ್ದಾರೆ.

 

- Advertisement - 

Share This Article
error: Content is protected !!
";