ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಜಯನಗರದ ಗತವೈಭವ ಸಾರುವ ಹಂಪಿ ಉತ್ಸವ – 2025 ಫೆಬ್ರವರಿ 28 ರಿಂದ ಮಾರ್ಚ್ 2 ರ ವರೆಗೆ 3 ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ಹಂಪಿ ಉತ್ಸವದಲ್ಲಿ ಎತ್ತಿನ ಬಂಡಿ ಮೇಳ, ಶ್ವಾನ ಸ್ಪರ್ಧೆ, ಸಾಹಸ ಕ್ರೀಡೆಗಳು, ಕುಸ್ತಿ ಪಂದ್ಯಾವಳಿ, ಗ್ರಾಮೀಣ ಕ್ರೀಡೆಗಳು, ಪುಸ್ತಕ ಮೇಳ, ಆಹಾರ ಮೇಳ, ಫಲ-ಪುಷ್ಪ ಪ್ರದರ್ಶನ ಕೂಡ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ವಿಜಯನಗರದ ಅರಸರು ಕಲೆ, ಸಾಹಿತ್ಯ, ಸಂಸ್ಕೃತಿಗೆ ಹೆಚ್ಚಿನ ಪ್ರಾಧಾನ್ಯ ನೀಡಿದ್ದರು. ಹಂಪಿ ಉತ್ಸವದಲ್ಲಿ ಜಾನಪದ ಕಲಾವಿದರು ಈ ನೆಲದ ಕಲೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಕಾಂಗ್ರೆಸ್ ಮಾಹಿತಿ ನೀಡಿದೆ.