ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸತೀಶ್‌ಜಾರಕಿಹೊಳಿ ಹಾಗೂ ಡಿಕೆಶಿ ನಡುವಿನ ಗುದ್ದಾಟ ತಾರಕಕ್ಕೇರಿದೆ. ಸಿದ್ದರಾಮಯ್ಯ ರನ್ನು ಕುರ್ಚಿಯಿಂದ ಇಳಿಸಲು ಡಿ.ಕೆ ಶಿವಕುಮಾರ್ ಪ್ರಯತ್ನಪಟ್ಟರೆ ಇತ್ತ ಅದೇ ಕುರ್ಚಿಗೆ ಏರಲು ಸತೀಶ್ ಜಾರಕಿಹೊಳಿ ಮುಂದಾಗಿದ್ದಾರೆ.
ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸತೀಶ್ ಜಾರಕಿಹೊಳಿ ಮೂಲಕ ಡಿಕೆಶಿ ವಿರುದ್ಧ ಸಮರ ಸಾರಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿದೆ.
ಕಾಂಗ್ರೆಸ್‌ಪಕ್ಷದೊಳಗೆ ನಡೆಯುತ್ತಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ನಡುವಿನ ಗುದ್ದಾಟಕ್ಕೆ ವಿದೇಶ ಪ್ರವಾಸದ ಟಚ್‌ಸಿಕ್ಕಿದೆ. ಸಿದ್ದರಾಮಯ್ಯ ಅವರು ಡಿಸಿಎಂ ಡಿಕೆಶಿ ಅವರನ್ನು ಹಣಿಯಲು ಜಾರಕಿಹೊಳಿ ಬೆಂಬಲ ಪಡೆದುಕೊಳ್ಳುತ್ತಿದ್ದಾರೆ. ಇದರ ಮುಂದುವರೆದ ಭಾಗವಾಗಿ ಸಚಿವ ಜಾರಕಿಹೊಳಿ ಅವರು ತಮ್ಮ ಆಪ್ತರೊಂದಿಗೆ ವಿದೇಶ ಪ್ರವಾಸ ಕೈಗೊಳ್ಳಲು ಮುಂದಾಗಿದ್ದಾರೆ.
ಡಿಕೆಶಿ ಸಿಎಂ ಕುರ್ಚಿ ಆಸೆಗೆ ದುಬೈ ಟೂರ್ ಮೂಲಕ ಜಾರಕಿಹೊಳಿ ಟೈಂ ಬಾಂಬ್ ಫಿಕ್ಸ್ ಮಾಡಿದ್ದು, ಡಿಕೆಶಿಯವರ ಸಿಎಂ ಕುರ್ಚಿ ಕನಸು ಕನಸಾಗಿಯೇ ಉಳಿಯಲಿದೆ. ಸಿದ್ದರಾಮಯ್ಯ ಅವರ ಆಟದ ಮುಂದೆ ಡಿಕೆಶಿ ನಿಸ್ತೇಜರಾಗಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

