ಮಧುಗಿರಿ ಬಿಜೆಪಿ ಅಧ್ಯಕ್ಷರಾಗಿ ಹನುಮಂತರೆಡ್ಡಿ ಪದಗ್ರಹಣ

News Desk

ಚಂದ್ರವಳ್ಳಿ ನ್ಯೂಸ್, ಮಧುಗಿರಿ:
ಮಧುಗಿರಿ ತಾಲ್ಲೂಕು ಬಿ.ಜೆ.ಪಿ. ಮಂಡಲ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹನುಮಂತರೆಡ್ಡಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ವಕೀಲರು ಹಾಗೂ ನಿಕಟಪೂರ್ವ ಅಧ್ಯಕ್ಷ ನಾಗೇಂದ್ರ, ಮಾಜಿ ಅಧ್ಯಕ್ಷ ಪಾಂಡುರಂಗಾರೆಡ್ಡಿ, ನಾಗರಾಜು, ಮಂಜುನಾಥ್ ಹಾಗೂ ಕಾರ್ಯದರ್ಶಿ ಹರೀಶ್ ಮತ್ತು ಮಧುಗಿರಿ ತಾಲ್ಲೂಕಿನ ಬಿ.ಜೆ.ಪಿ ಪಕ್ಷದ ಮುಖಂಡರು, ಕಾರ್ಯಕರ್ತರ ಸಮ್ಮುಖದಲ್ಲಿ ಮಧುಗಿರಿ ಶಕ್ತಿದೇವತೆ ಶ್ರೀ ದಂಡಿನ ಮಾರಮ್ಮ ದೇವಿಗೆ ಪೂಜೆ ಸಲ್ಲಿಸಿ, ಅಲ್ಲಿಂದ ಡಾ. ಬಿ.ಆರ್. ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಬಿ.ಜೆ.ಪಿ.ಯ ಮಧುಗಿರಿ ಜಿಲ್ಲಾ ಘಟಕ ಕಛೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದರು.

ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ಮುಂದಿನ ದಿನಗಳಲ್ಲಿ ಗ್ರಾಮ ಹಂತದಲ್ಲಿ ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸಿ, ಮುಂಬರುವ ಜಿ.ಪಂ ಹಾಗೂ ತಾ.ಪಂ. ಚುನಾವಣೆಗಳಲ್ಲಿ ಪಕ್ಷದ  ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಅಧ್ಯಕ್ಷ ಹನುಮಂತರೆಡ್ಡಿ ತಿಳಿಸಿದರು.

ಕಂದಾಯ ಇಲಾಖೆಯಲ್ಲಿ ಸುಮಾರು ವರ್ಷಗಳ ಹಿಂದೆ ಸಾಗುವಳಿ ನೀಡಿ ಖಾತೆ, ಪಹಣಿಯಾಗಿದ್ದರೂ ದುರಸ್ಥಿಯಾಗಿರುವುದಿಲ್ಲ ಹಾಗೂ ಇತ್ತೀಚೆಗೆ ಪಹಣಿಯಲ್ಲಿ ಒಟ್ಟುಗೂಡಿಸುವಿಕೆಯಿಂದಾಗಿ ಹಲವಾರು ರೈತರಿಗೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ತಾಲ್ಲೂಕು ಕಛೇರಿ ಮುಂಭಾಗ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರತಿಭಟಿಸಿ, ರೈತರಿಗೆ ಅನುಕೂಲ ಮಾಡಿಕೊಡಲು ಬದ್ಧನಾಗಿದ್ದು, ಪಕ್ಷ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುತ್ತೇನೆ ಎಂದು ಹನುಮಂತರೆಡ್ಡಿ ತಿಳಿಸಿದರು.

 

 

- Advertisement -  - Advertisement -  - Advertisement - 
Share This Article
error: Content is protected !!
";