ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸೋಣ” ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸೋಮವಾರ ಹರ್ ಘರ್ ತಿರಂಗಾ ಅಭಿಯಾನದ ರಾಜ್ಯ ಮಟ್ಟದ ಪೂರ್ವಭಾವಿ ಸಭೆಯ ಉದ್ಘಾಟನೆ ನೆರವೇರಿಸಿ ಅಭಿಯಾನದ ಪೋಸ್ಟರ್ ಬಿಡುಗಡೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ಆಗಸ್ಟ್ 13 ರಿಂದ 15 ರವರೆಗೆ ದೇಶಾದ್ಯಂತ ನಡೆಯುತ್ತಿರುವ #HarGharTiranga ಅಭಿಯಾನ ಪ್ರತಿ ಮನೆ ಮನೆಗಳಲ್ಲೂ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಅಭಿಯಾನವನ್ನು ರಾಜ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಲು ಪಕ್ಷದ ಕಾರ್ಯಕರ್ತರು ಶ್ರಮಿಸುವ ಜತೆಗೆ ನಾವೆಲ್ಲರೂ ಪಾಲ್ಗೊಂಡು ಎಲ್ಲೆಡೆ ರಾಷ್ಟ್ರಪ್ರೇಮ ಪಸರಿಸಬೇಕೆಂಬ ಕರೆ ನೀಡಲಾಯಿತು ಎಂದು ವಿಜಯೇಂದ್ರ ತಿಳಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಭಾರತದ ‘ಹರ್ ಘರ್ ತಿರಂಗಾ‘ ಅಭಿಯಾನದ ಪ್ರಮುಖ ಕೆ. ಸುರೇಂದ್ರನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಕು. ಸಿ. ಮಂಜುಳಾ,
ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕ ಧೀರಾಜ್ ಮುನಿರಾಜ್, ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಡಾ. ಮಲ್ಲಿಕಾರ್ಜುನ ಬಾಳಿಕಾಯಿ, ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್.ದತ್ತಾತ್ರಿ ಸೇರಿದಂತೆ ಪಕ್ಷದ ಪ್ರಮುಖರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

