ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದ ಪ್ರಗತಿ ಗ್ರಾಮೀಣ ಬ್ಯಾಂಕ್ ದರೋಡೆಗೆ ವಿಫಲ ಯತ್ನ ನಡೆದಿದೆ. ನಾಲ್ಕು ಜನ ಖತರ್ನಾಕ್ ಕಳ್ಳರು ಬ್ಯಾಂಕ್ ಕಿಟಕಿಯ ಸರಳುಗಳನ್ನ ಮುರಿದು ಒಳಗೆ ನುಗ್ಗಿದ್ದು ಬ್ಯಾಂಕಿನ ಖಜಾನೆ ಮುರಿದು ಹಣ ದೋಚಲು ಯತ್ನಿಸಿದಾಗ ಬ್ಯಾಂಕಿನಲ್ಲಿ ಸೈರನ್ ಶಬ್ದ ಆಗುತ್ತಿದ್ದಂತೆ ಕಾಲ್ಕಿತ್ತಿರುವ ಘಟನೆ ನಡೆದಿದೆ.
ಖತರ್ನಾಕ್ ಕಳ್ಳರ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರು ಭೇಟಿ, ಪರಿಶೀಲನೆ ಮಾಡಿದ್ದಾರೆ. ಅಬ್ಬಿನಹೊಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.