ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ” ಎನ್ನುವಂತೆ ಮುಖ್ಯಮಂತ್ರಿ ಆದಿಯಾಗಿ ಸಚಿವರು, ಅಧಿಕಾರಿಗಳು ಸೇರಿದಂತೆ ಇಡೀ ಕರ್ನಾಟಕ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿರುವಾಗ ಇನ್ನು ಹಿರಿಯ ಅಧಿಕಾರಿಗಳು ಸುಮ್ಮನಿರುತ್ತಾರೆಯೇ? ಎಂದು ಸಿಟಿ ರವಿ ವಾಗ್ದಾಳಿ ಮಾಡಿದ್ದಾರೆ.

ಕಳೆದ ಮೂರೂವರೆ ವರ್ಷಗಳಲ್ಲಿ ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ 195 ಹಿರಿಯ ಶ್ರೇಣಿ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಪ್ರಕರಣಗಳು ದಾಖಲಾಗಿರುವುದು, ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಭ್ರಷ್ಟಾಚಾರ, ಅವ್ಯವಹಾರ ಎಷ್ಟು ತಾಂಡವವಾಡುತ್ತಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.

- Advertisement - 

ಮೂರು ಬಿಟ್ಟವರು ಊರಿಗೇ ದೊಡ್ಡವರು” ಎನ್ನುವಂತೆ, ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಹೇಗೂ ನಿರ್ನಾಮ ಆಗಲಿದೆ ಎಂದು ಖಾತ್ರಿ ಆಗಿರುವ ಸಚಿವರು, ಶಾಸಕರು ನಿರ್ಲಜ್ಜವಾಗಿ ಎಗ್ಗಿಲ್ಲದೆ ಸಿಕ್ಕಸಿಕ್ಕ ಕಡೆ ಲೂಟಿ ಹೊಡೆಯುತ್ತಿದ್ದರೆ, “ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ” ಎನ್ನುವಂತೆ ಅಧಿಕಾರಶಾಹಿ ಕೂಡ ಭ್ರಷ್ಟಾಚಾರಾದಲ್ಲಿ ಮುಳುಗಿದೆ.

ಒಟ್ಟಿನಲ್ಲಿ ಈ ಕಡು ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ಉಳಿಗಾಲವಿಲ್ಲ ಎಂದು ರವಿ ಅವರು ಟೀಕಿಸಿದ್ದಾರೆ.

- Advertisement - 

 

Share This Article
error: Content is protected !!
";