ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹರಿಯಾಣ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಹ್ಯಾಟ್ರಿಕ್‌ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಿಹಿ ಹಂಚಿ ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆ ನಡೆಸಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಅವರು ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ
ಈ ಸಂದರ್ಭದಲ್ಲಿ ವಿಧಾನ ಸಭಾ ವಿರೋಧ ಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್‌ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್‌ಸದಸ್ಯ ಸಿ.ಟಿ.ರವಿ,
ರಾಜ್ಯ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಬಸವರಾಜ ಮತ್ತೀಮಡು, ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು, ಶಾಸಕರಾದ ಮಾನಪ್ಪ ವಜ್ಜಲ್, ಮಾಜಿ ಸಂಸದರಾದ ಮುನಿಸ್ವಾಮಿ ಸೇರಿದಂತೆ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.