ಹಾಸನದ ನೈಜ ಫಟನೆ ಆಧರಿಸಿದ ಪ್ರೀತಿಯ ಹುಚ್ಚ ಏಪ್ರಿಲ್ ಗೆ ಬಿಡುಗಡೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರೀತಿಯ ಹುಚ್ಚ ಹಾಸನದ ನೈಜಫಟನೆ ಏಪ್ರಿಲ್ ತಿಂಗಳಲ್ಲಿ ಬಿಡುಗಡೆ
  ‌‌‌‌ಕುಮಾರ್ ಮೂವೀಸ್ ಬ್ಯಾನರ್ ಅಡಿಯಲ್ಲಿ ವಿ.ಕುಮಾರ್, ಬಿ.ಜಿ.ನಂದಕುಮಾರ್ ನಿರ್ಮಿಸಿರುವ ಚಿತ್ರ ಪ್ರೀತಿಯ ಹುಚ್ಚ.  ಕನ್ನಡ  ತೆಲುಗು, ತಮಿಳು ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿರುವ ಈ ಚಿತ್ರವು ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣಪತ್ರ ಪಡೆದಿದ್ದು, ಏಪ್ರಿಲ್ ತಿಂಗಳ ಎರಡನೇ ವಾರ ತೆರೆಕಾಣುತ್ತಿದೆ.

     ಮ್ಯೂಸಿಕಲ್ ಲವ್ ಸ್ಟೋರಿ ‌ಒಳಗೊಂಡ ಈ ಚಿತ್ರಕ್ಕೆ ಗಾಯತ್ರಿ ಎಂಬ ಹಾರರ್ ಸಿನಿಮಾ ನಿರ್ದೇಶಿಸಿದ್ದ ವಿ.ಕುಮಾರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.‌

 1998-90ರಲ್ಲಿ ಹಾಸನದಲ್ಲಿ ನಡೆದ ನೈಜ ಘಟನೆಯೊಂದು ಈ ಚಿತ್ರಕ್ಕೆ ಪ್ರೇರಣೆ. ಅಮಾಯಕ ಯುವತಿಯೊಬ್ಬಳ ದಾರುಣ ಕಥೆ ಇದಾಗಿದ್ದುಮದುವೆಯಾದ ಮೊದಲ ರಾತ್ರಿಯೇ ದುಷ್ಟರ ಜಾಲಕ್ಕೆ ಸಿಕ್ಕು ಮುಂಬೈನ ರೆಡ್‌ಲೈಟ್ ಏರಿಯಾಕ್ಕೆ ಮಾರಾಟವಾಗುವ  ನಾಯಕಿಯ ಜೀವನ ಮುಂದೆ ಯಾವೆಲ್ಲ  ತಿರುವು ಪಡೆದುಕೊಂಡಿತು, ಪ್ರೀತಿಸಿ ಮದುವೆಯಾದ ಪತ್ನಿಯನ್ನು ಕಳೆದುಕೊಂಡ ನಾಯಕ ಯಾವ ಸ್ಥಿತಿ ತಲುಪಿದ ಎಂಬುದನ್ನು ನಿರ್ದೇಶಕ ಕುಮಾರ್ ಅವರು ಪ್ರೀತಿಯ ಹುಚ್ಚ ಚಿತ್ರದ ಮೂಲಕ ಹೇಳಹೊರಟಿದ್ದಾರೆ.

    ಈ ಚಿತ್ರಕ್ಕೆ ಬೆಂಗಳೂರು. ಮಂಡ್ಯ, ಚಿಕ್ಕಮಗಳೂರು, ಹಾಸನ, ಶ್ರವಣಬೆಳಗೊಳ ಹಾಗೂ ಮುಂಬೈನ ಕಾಮಾಟಿಪುರದಲ್ಲಿ ೬೫ ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. 

 ಈ ಚಿತ್ರದಲ್ಲಿ ಸುಂಟಿಸ್ಟಾರ್ ವಿಜಯ್ ನಾಯಕನಾಗಿ ನಟಿಸಿದ್ದು, ಮುಂಬೈ ಮೂಲದ ಕುಂಕುಮ್ ನಾಯಕಿಯ ಪಾತ್ರ ನಿರ್ವಹಿಸಿದ್ದಾರೆ. ಐಟಂ ಸಾಂಗ್‌ಮಾಡುತ್ತಿದ್ದ ಅಲಿಶಾ ಮುಂಬೈ ರೆಡ್ ಲೈಟ್ ಏರಿಯಾದ ಡಾನ್ ಆಗಿ ಕಾಣಿಸಿಕೊಂಡಿದ್ದಾರೆ.

 ಈ ಚಿತ್ರದ ೪ ಹಾಡುಗಳಿಗೆ ಜೆ.ಎನ್. ರಂಗರಾಜನ್ ಸಂಗೀತ ಸಂಯೋಜನೆ, ಸುನಿಲ್ ಕೆ.ಆರ್‌.ಎಸ್. ಅವರ ಛಾಯಾಗ್ರಹಣಸುಪ್ರೀಂ ಸುಬ್ಬು ಅವರ ಸಾಹಸ, ಪ್ರವೀಣ್ ವಿಷ್ಣು ಅವರ ಸಂಕಲನವಿದೆ. “ಪ್ರೀತಿಯ ಹುಚ್ಚ” ಕುಂಕುಮ್, ನಿರ್ಮಾಪಕರು; ವಿ. ಕುಮಾರ್, ಬಿ.ಜಿ. ನಂದಕುಮಾರ್.

   ಉಳಿದ ತಾರಾಗಣದಲ್ಲಿ ದಶಾವರ ಚಂದ್ರು, ದುಬೈ ರಫೀಕ್, ಉಮೇಶ್ ಪುಂಗ, ಅಲಿಶಾ, ಆರ್.ಚಂದ್ರು, ಪುಷ್ಪಲತಾ, ಜೋಗಿ ನಾಗರಾಜ್, ಪೂರ್ಣಿಮಾ, ವಿ.ಭಾಸ್ಕರರಾಜ್ಮಹದೇವಸ್ವಾಮಿ. ಗೀತಾ, ಸುನಿತಾ, ಪ್ರಮೋದ್, ಮಹದೇವ, ಆನಂದ್ ಮುಂತಾದವರಿದ್ದಾರೆ.

Share This Article
error: Content is protected !!
";