ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಲು ಗುರುವಾರ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಯಿತು ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.
ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್, ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ತಮ್ಮ ಕ್ಷೇತ್ರದ ರೈತರೊಂದಿಗೆ ಸಭೆಯಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಹೆದ್ದಾರಿ ಸಚಿವರಿಗೆ ರೈತರ ಸಮಸ್ಯೆಗಳ ಕುರಿತು ಮನವಿಗಳನ್ನು ಸಲ್ಲಿಸಲಾಯಿತು.

