ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೆಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತ ಭೇಟಿ; ನಾಡಿನ ಏಳಿಗೆಗಾಗಿ ಪ್ರಾರ್ಥನೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಮೈಸೂರು:
ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ತಮ್ಮ ಕುಟುಂಬ ಸದಸ್ಯರೊಂದಿಗೆ ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

​ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಈ ಕುರಿತು ಮಾಹಿತಿ ಹಂಚಿಕೊಂಡ ಅವರು, “ನಾಡದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರನ್ನು ಕುಟುಂಬ ಸಮೇತ ದರ್ಶನ ಮಾಡಿಕೊಳ್ಳುವ ಭಾಗ್ಯ ನನ್ನದಾಯಿತು. ಸರ್ವರಿಗೂ ಶುಭವಾಗಲಿ ಹಾಗೂ ಎಲ್ಲೆಡೆ ಸುಖ, ಶಾಂತಿ, ನೆಮ್ಮದಿ ಮತ್ತು ಸಮೃದ್ಧಿ ನೆಲಸಲಿ ಎಂದು ತಾಯಿಯಲ್ಲಿ ಅರಿಕೆ ಮಾಡಿಕೊಳ್ಳಲಾಯಿತು” ಎಂದು ತಿಳಿಸಿದ್ದಾರೆ.

- Advertisement - 

​ಕುಟುಂಬದೊಂದಿಗೆ ಆಗಮಿಸಿದ್ದ ಅವರಿಗೆ ದೇವಸ್ಥಾನದ ವತಿಯಿಂದ ಪೂರ್ಣಕುಂಭ ಸ್ವಾಗತ ಕೋರಿ, ದೇವಿಯ ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ ಜನರ ಕ್ಷೇಮಾಭಿವೃದ್ಧಿಗಾಗಿ ಮತ್ತು ಮಳೆ-ಬೆಳೆ ಸಮೃದ್ಧಿಯಾಗಿ ನಾಡು ಸುಭಿಕ್ಷವಾಗಿರಲಿ ಎಂದು ಪ್ರಾರ್ಥಿಸಿದರು.
​ದೇವಸ್ಥಾನದ ಆವರಣದಲ್ಲಿ ಅಭಿಮಾನಿಗಳು ಮತ್ತು ಸಾರ್ವಜನಿಕರು ನೆರೆದಿದ್ದು
, ಅವರೊಂದಿಗೆ ಕುಶಲೋಪರಿ ವಿಚಾರಿಸಿದರು. ಈ ಭೇಟಿಯ ವೇಳೆ ಕುಟುಂಬದ ಪ್ರಮುಖ ಸದಸ್ಯರು ಉಪಸ್ಥಿತರಿದ್ದರು.

 

- Advertisement - 

 

Share This Article
error: Content is protected !!
";