ಶಾಸಕರ ಖರೀದಿಗೆ ಎಸ್ಐಟಿ ರಚನೆ ಮಾಡಲಿ-ಹೆಚ್ ಡಿಕೆ

News Desk

ಚಂದ್ರವಳ್ಳಿ ನ್ಯೂಸ್, ಮೈಸೂರು:
ಮೈಸೂರಿನ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಭಗವಾನ್ ಶ್ರೀ ಬಿರ್ಸಾ ಮುಂಡಾ ಜಯಂತಿ ಹಾಗೂ ಜನಜಾತಿಯ ಗೌರವ ದಿನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪಾಲ್ಗೊಂಡು ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಸೌಲಭ್ಯ ವಿತರಿಸಿದರು.

ಈ ಆಚರಣೆಯಲ್ಲಿ ಪ್ರಧಾನಿಮಂತ್ರಿ ನರೇಂದ್ರ ಮೋದಿ ಅವರು ಬಿಹಾರದ ಜಮುಯ್ ಪಟ್ಟಣದಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಹಾಗೂ ಬುಡಕಟ್ಟು ಸಮುದಾಯಗಳ ಕಲ್ಯಾಣಕ್ಕಾಗಿ 6,600 ಕೋಟಿಯಷ್ಟು ಕಾರ್ಯಕ್ರಮಗಳನ್ನು ಘೋಷಣೆ ಮಾಡಿದರು ಎಂದು ಕುಮಾರಸ್ವಾಮಿ ತಿಳಿಸಿದರು.

ಶಾಸಕರ ಖರೀದಿಗೆ ಎಸ್ಐಟಿ ರಚನೆ ಮಾಡಲಿ-ಹೆಚ್ ಡಿಕೆ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬೀಳಿಸಲು ಕಾಂಗ್ರೆಸ್ ಪಕ್ಷದ ಶಾಸಕರಿಗೆ ತಲಾ
₹50 ಕೋಟಿ ಆಫರ್ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರ ಆರೋಪದ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಖಾರವಾಗಿ ಪ್ರತಿಕ್ರಿಯಿಸಿ ಸಿಎಂ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದಿದ್ದಾರೆ.

ಶಾಸಕರಿಗೆ ತಲಾ 50 ಕೋಟಿ ಎಂದು ಅಷ್ಟು ನಿಖರವಾಗಿ ಹೇಳುತ್ತಿದ್ದಾರೆ. ಹಾಗಿದ್ದರೆ ಸಿಎಂ ಬಳಿ ಎಲ್ಲಾ ಮಾಹಿತಿ ಇದೆ ಎಂದಾಯಿತಲ್ಲವೇ. ಕಾಂಗ್ರೆಸ್ ಸರ್ಕಾರ ಪ್ರತಿಯೊಂದಕ್ಕೂ ಎಸ್‌ಐಟಿ ರಚನೆ ಮಾಡಿ ತನಿಖೆ ಮಾಡಿಸುತ್ತಿದ್ದಾರೆ. ಶಾಸಕರ ಖರೀದಿ ವಿಷಯಕ್ಕೂ ಒಂದು ಎಸ್ಐಟಿ ರಚನೆ ಮಾಡಲಿ ಎಂದು ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಏನೇನು ಆಗಿದೆ ಎಂದು ಸ್ವತಃ ಯೋಗೇಶ್ವರ್ ಅವರೇ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಜಯಶಾಲಿ ಆಗುತ್ತಾರೆ. ಅದರ ಬಗ್ಗೆ ನಾನೇನು ವಿಮರ್ಶೆ ಮಾಡುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಜಮೀರ್ ಹೇಳಿಕೆಯಿಂದ ಏನಾಗಿದೆ ಎನ್ನುವುದು ಫಲಿತಾಂಶ ಬರುವ ದಿನ ಗೊತ್ತಾಗುತ್ತದೆ. ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯ ಅವರ ಸೊಕ್ಕು ಮುರಿಯಬೇಕು ಎಂದು ದೇವೇಗೌಡರು ಹೇಳಿರುವುದು ಮಾನಹಾನಿ ಹೇಳಿಕೆಯೇ? ಅವರ ವಿರುದ್ಧವೂ ಲಘುವಾಗಿ ಹೇಳಿಕೆ ಕೊಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಪ್ರತಿಪಕ್ಷದ ನಾಯಕರ ಕಾರ್ಯಕರ್ತರ ವಿರುದ್ಧ ವಿನಾಕಾರಣ ಕೇಸುಗಳನ್ನು ಸಿದ್ದರಾಮಯ್ಯ ಸರ್ಕಾರ ಹಾಕುತ್ತಿದೆ. ರಾಜ್ಯಪಾಲರ ಕಚೇರಿಯನ್ನೇ ಶೋಧ ಮಾಡುತ್ತೇನೆ ಎಂದು ಹೊರಟಿದ್ದ ಪೊಲೀಸ್ ಅಧಿಕಾರಿಯನ್ನು ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತ ಪಡಿಸಿದರು.

ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರು ಕೆಟ್ಟ ಹೇಳಿಕೆ ಕೊಟ್ಟ ಸಚಿವರ ಮಾತುಗಳನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ಇದು ನಾಚಿಕೆಗೇಡು. ಇದನ್ನು ನಾಗರಿಕ ಸರ್ಕಾರ ಎಂದು ಕರೆಯಲು ಸಾಧ್ಯವೇ ಎಂದು ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಮುಂದುವರೆದು ಮಾತನಾಡಿದ ಕುಮಾರಸ್ವಾಮಿ ಚಾಮುಂಡಿ ತಾಯಿ ಮುಂದೆ ನಿಂತು ಹೇಳುತ್ತಿದ್ದೇನೆ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹಿಂದೊಮ್ಮೆ ನನ್ನನ್ನು ಕೇವಲ ಕುಮಾರಎಂದು ಕರೆದಿದ್ದಕ್ಕೆ ಹೊರಟ್ಟಿ ಅವರನ್ನು ಹೊಡೆಯಲು ಹೋದ ಗಿರಾಕಿ ಜಮೀರ್ ವಿರುದ್ದ ಕುಮಾರಸ್ವಾಮಿ ಸಚಿವ ಜಮೀರ್ ವಿರುದ್ಧ ವಾಗ್ದಾಳಿ ಮಾಡಿದರು.

ಕೇಂದ್ರ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ, ಶಾಸಕರಾದ ಶ್ರೀವತ್ಸ, ಮಾಜಿ ಸಚಿವ ಸಾ.ರಾ.ಮಹೇಶ್, ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ, ಮಾಜಿ ಶಾಸಕ ಅಶ್ವಿನ್ ಕುಮಾರ್, ಮಾಜಿ ಮೇಯರ್ ರವಿ ಕುಮಾರ್ ಸೇರಿದಂತೆ ಜೆಡಿಎಸ್, ಬಿಜೆಪಿ ಪಕ್ಷದ ಅನೇಕರು ಮುಖಂಡರು, ಕಾರ್ಯಕರ್ತರು ನಾಯಕರು ಕೇಂದ್ರ ಸಚಿವರ ಜತೆಯಲ್ಲಿ ಇದ್ದರು.

Share This Article
error: Content is protected !!
";