ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇಂದು ವಿಶ್ವ ಆರೋಗ್ಯ ದಿನ. ಕರ್ನಾಟಕ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.
ಭ್ರಷ್ಟ ಸಿದ್ದರಾಮಯ್ಯ ಸರ್ಕಾರದಲ್ಲಿ ರಾಜ್ಯದ ಆರೋಗ್ಯ ವ್ಯವಸ್ಥೆ ಹಳ್ಳ ಹಿಡಿದಿರುವುದಕ್ಕೆ ಈ ವರದಿಯೇ ಸಾಕ್ಷಿ ಎಂದು ಜೆಡಿಎಸ್ ತಿಳಿಸಿದೆ.
ರಾಜ್ಯದ ಶೇ. 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶವಾಗಾರ ಕೊಠಡಿಗಳೇ ಇಲ್ಲ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಸ್ಪತ್ರೆಗಳ ಹೊರಗಿನ ಬಯಲಿನಲ್ಲಿ, ಇಲ್ಲವೇ ಹೊಲಗಳಲ್ಲಿ ಮರಣೋತ್ತರ ಪರೀಕ್ಷೆ ಮಾಡುವಂತಹ ದುಸ್ಥಿತಿ ಎದುರಾಗಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ ಬಯಲಿನಲ್ಲಿ ಮರಣೋತ್ತರ ಪರೀಕ್ಷೆ ನಿಮ್ಮ ಕಾಂಗ್ರೆಸ್‌ಸರ್ಕಾರದ ದುರಾಡಳಿತವನ್ನು ಬೆತ್ತಲುಗೊಳಿಸಿದೆ ಎಂದು ಜೆಡಿಎಸ್ ಹರಿಹಾಯ್ದಿದೆ.
4 ದಶಕಗಳಿಂದ ಕರ್ನಾಟದಲ್ಲಿ ಅಧಿಕಾರ ಅನುಭವಿಸಿ, ಭ್ರಷ್ಟಾಚಾರದ ಪಿತಾಮಹ ಎನಿಸಿರುವ ಕಾಂಗ್ರೆಸ್, ಉತ್ತರ ಕರ್ನಾಟಕದ ಜನರಿಗೆ ಕನಿಷ್ಟ ಮೂಲ ಸೌಕರ್ಯ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಜೆಡಿಎಸ್ ಹರಿಹಾಯ್ದಿದೆ.