ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಇದೇ ಆಗಸ್ಟ್ 12ರಂದು ಬೆಳಿಗ್ಗೆ 10ಕ್ಕೆ ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ “ಹೃದಯ ಆರೋಗ್ಯ ತಪಾಸಣಾ ಶಿಬಿರ” ಆಯೋಜಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರೋಣ ವಾಸುದೇವ್ ಉದ್ಘಾಟನೆ ನೆರವೇರಿಸುವರು. ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೆಸ್ವಾಮಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕರು ಮತ್ತು
ಡೀನ್ ನಿರ್ದೇಶಕ ಡಾ.ಬಿ.ವೈ.ಯುವರಾಜ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಭಾಗವಹಿಸುವರು. ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಂ. ಅನಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿ ಆರ್. ಗಂಗಾಧರ್ ಉಪಸ್ಥಿತಿ ವಹಿಸುವರು. ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಅರವಳಿಕೆ ವಿಭಾಗದ ಡಾ.ಜಿ.ಎಚ್.ಮೇಘ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

