ಟಿಕೆಟ್ ಇಲ್ಲದೆ ಪ್ರಯಾಣಿಸಿದ 3851 ಪ್ರಯಾಣಿಕರಿಗೆ ಭಾರೀ ದಂಡ 

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಆಗಸ್ಟ್ –2024 ರ ಮಾಹೆಯಲ್ಲಿ ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43781 ವಾಹನಗಳನ್ನು ತನಿಖೆಗೊಳಪಡಿಸಿ 3692 ಪ್ರಕರಣಗಳನ್ನು ಪತ್ತೆಹಚ್ಚಿ, 3851 ಟಿಕೇಟ್ ರಹಿತ ಪ್ರಯಾಣಿಕರಿಂದ 6,21,383/- ರೂ ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿರುತ್ತಾರೆ.

ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 80,059/-ರೂ ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ.

              ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಈ ಮೂಲಕ ಪ್ರಯಾಣಿಕರಲ್ಲಿ ಮನವಿ ಮಾಡಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು (ಕಾ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";