ಭಾರೀ ಮಳೆ, ಚಿತ್ರದುರ್ಗ ಜಿಲ್ಲೆಯ ಶಾಲೆಗಳಿಗೆ ಡಿ.3 ರಂದು ರಜೆ ಘೋಷಣೆ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಫೆಂಗಲ್ ಚಂಡಮಾರುತ ಉಂಟಾಗಿದ್ದು, ಇದರ ಪರಿಣಾಮ ತಮಿಳುನಾಡು ಮಾತ್ರವಲ್ಲದೇ ಕರ್ನಾಟಕದ ಮೇಲೂ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದು, ಚಳಿ ವಾತಾವರಣ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾಡಳಿತದಿಂದ ಸೋಮವಾರ (ಡಿ.03) ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.
ಆದ್ದರಿಂದ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಸೋಮವಾರ ಅಂದರೆ ಡಿ.3ರಂದು ಸರ್ಕಾರಿ, ಅನುದಾನಿತ, ಅನುದಾನ ರಹಿತ ಎಲ್ಲ ಶಾಲಾಗಳಿಗೆ ರಜೆ ಘೋಷಣೆ ಮಾಡಲಾಗಿದೆ.