ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರೀ ಮಳೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನೈಋುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಫೆಂಗಲ್‌ಚಂಡಮಾರುತದ ಪರಿಣಾಮ ಈಗಾಗಲೇ ತಮಿಳುನಾಡಿನಲ್ಲಿ ಭಾರೀ ಮಳೆ ಮತ್ತು ಅನಾಹುತವನ್ನು ಸೃಷ್ಟಿಸಿದೆ. ಪುದುಚೇರಿಯಲ್ಲಿ ದಾಖಲೆ ಮಳೆಯಾಗಿದ್ದು
, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅದೇ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು ಅನಾಹುತ ಸೃಷ್ಠಿಸುವ ಸಾಧ್ಯತೆ ಇರುವುದರಿಂದ ಸರ್ಕಾರ ಎಚ್ಚರ ವಹಿಸಿದೆ.

ನೈಋುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಫೆಂಗಲ್‌ಚಂಡಮಾರುತದ ಪರಿಣಾಮ ಕರ್ನಾಟಕಕ್ಕೂ ತಟ್ಟಿದ್ದು, ಮುಂದಿನ ಎರಡು ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಾಲಾ-ಕಾಲೇಜಿಗೆ ರಜೆ-
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಡಿ.2ರಂದು ಸೋಮವಾರ ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ತಿಳಿಸಿದ್ದರು.

ಹೀಗಾಗಿ ಜಿಲ್ಲಾದ್ಯಂತ ಸೋಮವಾರ (ಡಿ.2) ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಈ ರಜಾ ದಿನದ ಕಲಿಕಾ ಪ್ರಕ್ರಿಯೆಗಳನ್ನ ಮುಂದಿನ ಸರಕಾರಿ ರಜೆ ದಿನಗಳಲ್ಲಿ ಸರಿದೂಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರು ಶಾಲೆ-ಕಾಲೇಜು ರಜೆ-
ಮೈಸೂರು ಜಿಲ್ಲೆಯಾದ್ಯಂತ ಫೆಂಗಲ್ ಚಂಡಮಾರುತ ಹಿನ್ನೆಲೆಯಿಂದಾಗಿ ಜಿಟಿ ಜಿಟಿ ಮಳೆಯಾಗುತ್ತಿದ್ದು, ಭಾನುವಾರ ಸಂಜೆ ಶುರುವಾದ ಮಳೆ ಇಡೀ ರಾತ್ರಿ ಸುರಿದಿದೆ. ಹೀಗಾಗಿ ಮೈಸೂರು ಜಿಲ್ಲೆಯ ಪಿಯು ಕಾಲೇಜು ಹಾಗೂ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಮಳೆ ಜತೆ ವಿಪರೀತ ಚಳಿಯೂ ಇದೆ. ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಮುಂಜಾಗೃತೆಯಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ.

ಹೆಚ್ಚು ಮಳೆ- ಚಂಡಮಾರುತದ ಹಿನ್ನೆಲೆಯಲ್ಲಿ 3 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಉಡುಪಿಯಲ್ಲೂ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ವಿಪರೀತ ಚಳಿ- ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದೆ. ಹಗಲಿನಲ್ಲಿ ಸೂರ್ಯನ ತಾಪ ಕಡಿಮೆ ಇರಲಿದೆ. ಇದರಿಂದ ದಕ್ಷಿಣ ಒಳನಾಡಿನಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿದೆ.

ಯೆಲ್ಲೋ ಅಲರ್ಟ್-
ಡಿ. 3 ರಂದು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ

ಡಿ.4 ರಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಯಲ್ಲೋ ಅಲರ್ಟ್‌ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ. ಚಂಡಮಾರುತದ ಪ್ರಭಾವ ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲೂ ಕಂಡುಬರಲಿದೆ. ಶ್ರೀಲಂಕಾ ನಂತರ ತಮಿಳುನಾಡಿನಲ್ಲಿ ಡೆಡ್ಲಿ ಫೆಂಗಲ್ ಚಂಡಮಾರುತ ಅಬ್ಬರಿಸುತ್ತಿದೆ.

ತಮಿಳುನಾಡಿನ ಕರಾವಳಿ ಪ್ರದೇಶಗಳನ್ನು ಅಕ್ಷರಶಃ ಲಾಕ್ ಮಾಡಿ ಇಟ್ಟುಕೊಂಡಿರುವ ಡೆಡ್ಲಿ ಫೆಂಗಲ್, ಬಿಟ್ಟು ಬಿಡದಂತೆ ಮಳೆ ಸುರಿಸುತ್ತಿದೆ. ಕಳೆದ ಮೂರು ದಿನಗಳಿಂದ ಫೆಂಗಲ್ ಆರ್ಭಟಕ್ಕೆ ತಮಿಳುನಾಡು ಸುಸ್ತಾಗಿದೆ. ತಮಿಳು ಕರಾವಳಿ ಪ್ರದೇಶಗಳ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿದೆ. ಫೆಂಗಲ್ ಚಂಡಮಾರುತಕ್ಕೆ ಕರ್ನಾಟಕವೂ ಒಂದಿಷ್ಟು ನಡುಗುತ್ತಿದೆ. ರಾಜ್ಯದಲ್ಲಿ ವಾತಾವರಣ ತುಂಬಾ ಬದಲಾಗಿದೆ.

 

- Advertisement -  - Advertisement -  - Advertisement - 
Share This Article
error: Content is protected !!
";