ಜೂನ್-14ರವರೆಗೆ ಭಾರೀ ಮಳೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯಾದ್ಯಂತ ಜೂನ್
14ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.

- Advertisement - 

ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಯಾಗುವ ಸಾಧ್ಯತೆ ಇದ್ದು, ಕರ್ನಾಟಕದ ಕರಾವಳಿ ಸೇರಿ 13 ಜಿಲ್ಲೆಗಳಲ್ಲಿ ಜೂನ್ 14ರವರೆಗೂ ಭಾರಿ ಮಳೆ ಸಾಧ್ಯತೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

- Advertisement - 

ರಾಜ್ಯದ 9 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

- Advertisement - 

Share This Article
error: Content is protected !!
";