ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರಾವಳಿ ಭಾಗದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಯಾರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕೊಡಗು, ಚಿಕ್ಕಮಗಳೂರು, ಉಡುಪಿ , ಉತ್ತರ ಕನ್ನಡ ಜಿಲ್ಲೆಗಳಲ್ಲಿ ವರುಣ ಅಬ್ಬರ ಜೋರಾಗಿದೆ.
ಕರ್ನಾಟಕದಲ್ಲಿ ಅದು ಜುಲೈ 31ರ ವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ಮಲೆನಾಡು ಜಿಲ್ಲೆಗಳಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಜುಲೈ 31 ರವರೆಗೂ ಭಾರಿ ಮಳೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಿಗೆ ಮುಂದಿನ 2 ದಿನವೂ ಆರೆಂಜ್ ಅಲರ್ಟ್ ಇದ್ದು, ಜುಲೈ 31 ರವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಮಲೆನಾಡು ಜಿಲ್ಲೆಗಳಿಗೂ ಮಳೆ ಆರ್ಭಟ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ , ಉತ್ತರಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಜುಲೈ 29 ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಜುಲೈ 30 ಹಾಗೂ ಜುಲೈ 31 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು , ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೂ ಜುಲೈ 30 ರವರೆಗೆ ಭಾರೀ ಮಳೆಯ ಮುನ್ನೆಚ್ಚರಿಕೆ ಕೊಡಲಾಗಿದೆ. ಸೋಮವಾರದವರೆಗೆ ರಾಜ್ಯದ ಇತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

