ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಗ್ರ ಕೃತ್ಯದಿಂದಾಗಿ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಧಾವಿಸಿದ್ದು, ಪ್ರವಾಸಿಗರ ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದೆ.
ಪ್ರವಾಸಿಗರ ಸಂಬಂಧಿಕರು, ಪರಿಚಯಸ್ಥರು ಅಥವಾ ಟೂರ್‌ಏಜೆನ್ಸಿಯವರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ನೀಡಲು ತಕ್ಷಣವೇ ಸಹಾಯವಾಣಿಗೆ ಕರೆ ಮಾಡಿ, ಮಾಹಿತಿ ನೀಡಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.