ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಹಾಯವಾಣಿ ಮತ್ತು ಆಪ್ತ ಸಮಾಲೋಚನೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಸ್.ಎಸ್.ಎಲ್.ಸಿ ಪರೀಕ್ಷೆಯು ವಿದ್ಯಾರ್ಥಿ ಜೀವನದ ಒಂದು ನಿರ್ಣಾಯಕ ಹಂತವಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪೆ
Çೀಷಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ಅತಿ ಹೆಚ್ಚು ಅಂಕ ಗಳಿಸುವಂತೆ ಒತ್ತಡ ಹೇರುತ್ತಿರುವುದು ಅವರ ಏಕಾಗ್ರತೆಯ ಮೇಲೆ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಭಯ ನಿವಾರಿಸಿ ಆತ್ಮಸ್ಥೈರ್ಯ ತುಂಬಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಪ್ರತಿ ವರ್ಷದಂತೆ ಈ ವರ್ಷವೂ “ಸಹಾಯವಾಣಿ” ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ವಿದ್ಯಾರ್ಥಿಗಳು ಮತ್ತು ಪೋಷಕರು ತಮ್ಮ ಸಮಸ್ಯೆ ಹಾಗೂ ಸಂದೇಹಗಳಿಗೆ ಪರಿಹಾರ ಪಡೆಯಲು ದೂರವಾಣಿ ಸಂಖ್ಯೆ 080-23310075 080-23310076 ಸಂಪರ್ಕಿಸಬಹುದು.

- Advertisement - 

ಕಾರ್ಯನಿರ್ವಹಣೆಯ ವೇಳಾಪಟ್ಟಿ ಸಹಾಯವಾಣಿಯು ಮಲ್ಲೇಶ್ವರಂನಲ್ಲಿರುವ ಮಂಡಲಿಯ ಕಚೇರಿಯಲ್ಲಿ ಪ್ರತಿದಿನ 2026 ರ ಮಾರ್ಚ್ 05 ರಿಂದ 15 ರವರೆಗೆ ಪ್ರತಿದಿನ ಅಪರಾಹ್ನ 4.00 ರಿಂದ ಸಂಜೆ 8.00 ರವರೆಗೆ ಕಾರ್ಯನಿರ್ವಹಿಸಲಿದೆ. ಭಾನುವಾರ ರಜಾ ದಿನವಾಗಿರುವುದರಿಂದ ಬೆಳಿಗ್ಗೆ 11.00 ರಿಂದ ಸಂಜೆ 5.00 ರವರೆಗೆ ಕಾರ್ಯನಿರ್ವಹಿಸಲಿದೆ.

2026ರ ಮಾರ್ಚ್ 18 ರಿಂದ ಏಪ್ರಿಲ್ 02 ರವರೆಗೆ  ನಿಯಂತ್ರಣ ಕೊಠಡಿಯಲ್ಲಿ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಪರೀಕ್ಷಾ ದಿನಗಳಂದು ಮಾತ್ರ  ಕಾರ್ಯನಿರ್ವಹಿಸಲಿದೆ.

- Advertisement - 

ವಿದ್ಯಾರ್ಥಿಗಳು ಮತ್ತು ಪೋಷಕರು ಮೇಲೆ ತಿಳಿಸಿರುವ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ತಮ್ಮ ಸಮಸ್ಯೆಗಳಿಗೆ, ಸಂದೇಹಗಳಿಗೆ ಪರಿಹಾರ ಪಡೆದುಕೊಳ್ಳಬಹುದು. ಹೆಚ್ಚಿನ ಸಂಖ್ಯೆಯಲ್ಲಿ  ಈ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ನಿರ್ದೇಶಕರಾದ (ಪರೀಕ್ಷೆಗಳು) ಹೆಚ್.ಎನ್.ಗೋಪಾಲಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
error: Content is protected !!
";