ಚಂದ್ರವಳ್ಳಿ ನ್ಯೂಸ್, ರಾಯಚೂರು:
ಸಿಎಂ ಹದ್ದೆ ಸೇರಿದಂತೆ ನಿತ್ಯ ಹರಿದಾಡುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ರಾಯಚೂರಿನಲ್ಲಿ ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಏನು ಹೇಳಿದ್ದಾರೋ ಅವರನ್ನೇ ಕೇಳಬೇಕು, ಅವರ ಬಳಿಯೇ ಹೋಗಿ ಕೇಳಿ ಎಂದು ತೀಕ್ಷ್ಣವಾಗಿ ಹೇಳಿದರು.
ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ನನ್ನ ಬಳಿ ಕೇಳಿದರೆ ಏನಾಗಬೇಕು. ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅಗತ್ಯವಿಲ್ಲ.
ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಏನು ಹೇಳಿದ್ದೀವಿ, ಪಕ್ಷ ಏನು ಹೇಳುತ್ತೋ ಅದನ್ನು ಒಟ್ಟಿಗೆ ಮಾಡಿಕೊಂಡು ಹೋಗ್ತೀವೆಂದು ಹೇಳಿದ್ದೇವೆ. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಶಿವಕುಮಾರ್ ತಿಳಿಸಿದ್ದಾರೆ.

