ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್

khushihost

ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ತನ್ನ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಇಂದು (ಸೆ.9) ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು.

ಪ್ರೊ.ರವಿವರ್ಮ ಕುಮಾರ್‌ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ಸೆಪ್ಟೆಂಬರ್‌ 3ರಂದು ನೇಮಕ ಮಾಡಲಾಗಿದೆ ಎಂದು ವಕೀಲ ಅಶೋಕ್‌ ನಾಯ್ಕ್‌ ನ್ಯಾಯಾಲಯಕ್ಕೆ ತಿಳಿಸಿದರು. ಈ ಹಿನ್ನೆಲೆ ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್‌ 19ಕ್ಕೆ ಮುಂದೂಡಲಾಗುವುದು ನ್ಯಾಯಾಲಯ ಹೇಳಿದೆ.

- Advertisement -  - Advertisement - 
Share This Article
error: Content is protected !!
";