ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೋಲಾರ ತಾಲೂಕಿನ ವಕ್ಕಲೇರಿ ಗ್ರಾಮದಿಂದ ನಗರದ ಸರ್ಕಾರಿ ಪದವಿಪೂರ್ವ ಕಾಲೇಜುವರೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ದೀರ್ಘ ಸಂಚಲನಕ್ಕೆ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿಆದೇಶಿಸಿದೆ.
ಕೋಲಾರದ ಜಿಲ್ಲಾಡಳಿತವು ಪಥ ಸಂಚಲನದ ಮಾರ್ಗ ಬದಲಾಯಿಸುವಂತೆ ಸೂಚನೆ ನೀಡಿದ್ದ ಕ್ರಮ ಪ್ರಶ್ನಿಸಿ ಆರ್ಎಸ್ಎಸ್ ಸಹ ಕಾರ್ಯವಾಹ ಶ್ರೀನಿವಾಸ ಮೂರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚ್ಚಿನ್ ಶಂಕರ್ ಮಗದಂ ಅವರಿದ್ದ ವಿಶೇಷ ನ್ಯಾಯಪೀಠ ಈ ಆದೇಶ ನೀಡಿದೆ. ಪಥ ಸಂಚಲನದ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಹೈಕೋರ್ಟ್ ಸೂಚನೆ ನೀಡಿ ಆದೇಶಿಸಿದೆ.