ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಮ್ಮೆ ಹೈಕೋರ್ಟ್ ಛೀಮಾರಿ!

News Desk

ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಮ್ಮೆ ಹೈಕೋರ್ಟ್ ಛೀಮಾರಿ!
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಿದ ಮುಸ್ಲಿಂ ಮತಾಂಧರ ಮೇಲಿನ ಕೇಸ್ ವಾಪಸ್ ಪಡೆಯಲು ಹೊಂಚು ಹಾಕಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದ್ದು, ಸಿದ್ದರಾಮಯ್ಯ ಸರ್ಕಾರದ ಓಲೈಕೆ ರಾಜಕಾರಣಕ್ಕೆ ನ್ಯಾಯಾಲಯ ಚಡಿ ಏಟು ಕೊಟ್ಟಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು.

- Advertisement - 

ಕಾಂಗ್ರೆಸ್ ಸರ್ಕಾರದ ಅನ್ಯಾಯದ ನಡೆಗಳಿಗೆ ನ್ಯಾಯಾಲಯ ಛೀಮಾರಿ ಹಾಕುತ್ತಿರುವುದು ಇದೆ ಮೊದಲಲ್ಲ.

- Advertisement - 

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಪಶು ಚಿಕಿತ್ಸಾಲಯಕ್ಕೆ ಬೀಗ ಹಾಕಿ ಅದನ್ನ ಅಲ್ಪಸಂಖ್ಯಾತರ ಇಲಾಖೆಗೆ ಹಸ್ತಾಂತರಿಸಲು ಹೊಂಚು ಕಾಕಿದ್ದ ಸಿಎಂ ಸಿದ್ದರಾಮಯ್ಯ ಸರ್ಕಾರದ ನಿರ್ಧಾರಕ್ಕೆ ತಡೆಯಾಜ್ಞೆ ನೀಡಿ ಮಾನ್ಯ ಹೈಕೋರ್ಟ್ ಛೀಮಾರಿ ಹಾಕಿತ್ತು.

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನ ಅಕ್ರಮವಾಗಿ ಬಂಧಿಸಿದ್ದು ಅತ್ಯಂತ ತಪ್ಪು ಎಂದು ರಾಜ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಿರಂಕುಶವಾದಿ ಧೋರಣೆಗೆ ಛೀಮಾರಿ ಹಾಕಿದ್ದ ಮಾನ್ಯ ಹೈಕೋರ್ಟ್, ತತಕ್ಷಣವಾಗಿ ಅವರನ್ನು ಬಿಡುಗಡೆಗೊಳಿಸಿ ಎಂದು ಆದೇಶ ನೀಡಿತ್ತು.

- Advertisement - 

ಬ್ರ್ಯಾಂಡ್ ಬೆಂಗಳೂರು ಕಟ್ಟುತ್ತೇವೆ ಎಂದು ಬಿಡಿಎ ಸಂಸ್ಥೆಯನ್ನು ಭ್ರಷ್ಟಾಚಾರ, ಅವ್ಯವಸ್ಥೆಯ ಕೂಪವಾಗಿಸಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನ ಮಾನ್ಯ ಹೈಕೋರ್ಟ್ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡು ಮಾರುವೇಷದಲ್ಲಿ ಒಮ್ಮೆ ನೋಡಿಕೊಂಡು ಬನ್ನಿ, ಸುಗ್ರೀವಾಜ್ಞೆ ಮೂಲಕ ಬಿಡಿಎ ಸಂಸ್ಥೆ ಮುಚ್ಚುವುದು ಒಳ್ಳೆಯದು ಎಂದು ಛೀಮಾರಿ ಹಾಕಿತ್ತು.

ಸರ್ಕಾರಿ ವಸತಿ ಶಾಲೆಯಲ್ಲಿ ಓದುವ ಬಡ ಕುಟುಂಬದ ಮಕ್ಕಳನ್ನ ಮಲಗುಂಡಿಗಿಳಿಸಿದವರ ಮೇಲೆ ಕ್ರಮ ಕೈಗೊಳ್ಳದ್ದಕ್ಕೆ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡು ನ್ಯಾಯಾಲಯ ಛೀಮಾರಿ ಹಾಕಿತ್ತು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣದಲ್ಲಿ ಇ.ಡಿ. ಅಧಿಕಾರಿಗಳ ವಿರುದ್ಧ ಸುಳ್ಳು ಕೇಸು ದಾಖಲಿಸಿ ಕಡೆಗೆ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿತ್ತು.

ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ನೀಡಿದ್ದ ಅನುಮತಿ ವಿರುದ್ಧ ಕೋರ್ಟ್ ಮೆಟ್ಲಲೇರಿದಾಗಲೂ ಸಿದ್ದರಾಮಯ್ಯ ಸರ್ಕಾರ ಮುಖಭಂಗ ಅನುಭವಿಸಿತ್ತು ಎಂದು ಅಶೋಕ ದೂರಿದರು.

ಸಿಎಂ ಸಿದ್ದರಾಮಯ್ಯ ನವರೇ, ನ್ಯಾಯಾಲಯಗಳ ಕೈಯಲ್ಲಿ ಛೀಮಾರಿ ಹಾಕಿಸಿಕೊಳ್ಳುವಲ್ಲಿ ನಿಮ್ಮ ಸರ್ಕಾರ ದಾಖಲೆ ಬರೆದಿದೆ. ತಾವು ರಾಜೀನಾಮೆ ನೀಡೋದಕ್ಕೆ ಇನ್ನೆಷ್ಟು ಬಾರಿ ಛೀಮಾರಿ ಹಾಕಿಸಿಕೊಳ್ಳಬೇಕು? ಎಂದು ವಿಪಕ್ಷ ನಾಯಕರು ತೀಕ್ಷ್ಣವಾಗಿ ಪ್ರಶ್ನೆಸಿದರು.

Share This Article
error: Content is protected !!
";