ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜಕೀಯ ದ್ವೇಷ, ಅಸೂಯೆ, ಕಮಿಷನ್ ದಾಹಕ್ಕಾಗಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನ ಔಷಧಿ ಕೇಂದ್ರಗಳನ್ನು ಮುಚ್ಚಿಸಲು ಹೊರಟಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿ, ಸರ್ಕಾರದ ಜನವಿರೋಧಿ ಆದೇಶವನ್ನು ರದ್ದು ಮಾಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳ ಉಪಯೋಗ ಪಡೆಯೋದಕ್ಕೂ ಕರ್ನಾಟಕದ ಜನತೆ ಕೋರ್ಟ್ ಮೆಟ್ಟಿಲೇರುವ ಪರಿಸ್ಥಿತಿ ಬಂದಿರುವುದು ಕನ್ನಡಿಗರ ದುರಾದೃಷ್ಟ.
ಇನ್ನಾದರೂ ರಾಜ್ಯ ಕಾಂಗ್ರೆಸ್ ಸರ್ಕಾರ, ಅಭಿವೃದ್ಧಿ, ಜನಕಲ್ಯಾಣದ ವಿಚಾರದಲ್ಲಿ ಅನವಶ್ಯಕವಾಗಿ ಕ್ಷುಲ್ಲಕ ರಾಜಕಾರಣ ಮಾಡುವದನ್ನ, ಸಣ್ಣತನ ತೋರಿಸುವುದನ್ನ ಬಿಡಲಿ. ರಾಜಕೀಯ ಮುತ್ಸದ್ಧಿತನ ಪ್ರದರ್ಶಿಸಲಿ ಎಂದು ಅಶೋಕ್ ತಾಕೀತು ಮಾಡಿದ್ದಾರೆ.

