ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಚಿತ್ರಮಂದಿರಗಳು, ಮಲ್ಟಿಪ್ಲೆಕ್ಸ್ ಸೇರಿ ಎಲ್ಲ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತು ಪಡಿಸಿ ಗರಿಷ್ಠ 200 ರೂ. ಏಕರೂಪ ದರ ನಿಗದಿಪಡಿಸಿ ಸರ್ಕಾರಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಬುಧವಾರ ತಡೆ ನೀಡಿ ಆದೇಶಿಸಿದೆ.
ರಾಜ್ಯ ಸರ್ಕಾರ ಸೆಪ್ಟೆಂಬರ್ 12ರಿಂದ ಅನ್ವಯವಾಗುವಂತೆ ಜಾರಿಗೆ ತಂದಿದ್ದ ಕರ್ನಾಟಕ ಸಿನಿಮಾ (ನಿಯಂತ್ರಣ)(ತಿದ್ದುಪಡಿ) ನಿಯಮಗಳು-2025 ಅನ್ನು ಪ್ರಶ್ನಿಸಿ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಪ್ರತಿನಿಧಿ ಶುಭಂ ಠಾಕೂರ್, ಪಿವಿಆರ್ ಐನಾಕ್ಸ್ ಲಿಮಿಟೆಡ್‌ನ ಷೇರುದಾರ ಸಂತನು ಪೈ, ಕೀಸ್ಟೋನ್ ಎಂಟರ್ಟೈನ್ಮೆಂಟ್, ವಿ ಕೆ ಫಿಲ್ಮ್ಸ್ ಮತ್ತು ಸಿನಿಪ್ಲೆಕ್ಸ್ಪ್ರೈವೆಟ್ಲಿಮಿಟೆಡ್ಹೈಕೋರ್ಟ್ಗೆ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿ ಪ್ರಶ್ನಿಸಿದ್ದರು.
ಈ ಅರ್ಜಿಗಳ ಭಾಗವಾಗಿ ಮಧ್ಯಂತರ ಕೋರಿಕೆಗೆ ಸಂಬಂಧಿಸಿದ ವಿಚಾರಣೆ ನಡೆಸಿ, ಕಾಯ್ದಿರಿಸಿದ ಆದೇಶವನ್ನು ನ್ಯಾಯಮೂರ್ತಿ ರವಿ ಹೊಸಮನಿ ಅವರ ಏಕಸದಸ್ಯ ಪೀಠ ಪ್ರಕಟಿಸಿತು.
ಕರ್ನಾಟಕ ಸಿನಿಮಾ (ನಿಯಂತ್ರಣ)(ತಿದ್ದುಪಡಿ) ನಿಯಮಗಳು – 2025ಕ್ಕೆ ತಡೆ ಕೋರಿರುವ ಮಧ್ಯಂತರ ಕೋರಿಕೆ ಪುರಸ್ಕರಿಸಲಾಗಿದ್ದು, ಮುಂದಿನ ಆದೇಶದವರೆಗೆ ಇದು ಜಾರಿಯಲ್ಲಿರಲಿದೆ ಎಂದು ಪೀಠ ಇದೇ ವೇಳೆ, ಸ್ಪಷ್ಟ ಪಡಿಸಿದೆ.
ಈ ಹಿಂದೆ ನಡೆದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಜಿಎಸ್‌ಟಿ ಹೊರತು ಪಡಿಸಿದ ಟಿಕೆಟ್‌ದರ 200 ರೂ. ನಿಗದಿಪಡಿಸಲಾಗಿದೆ. ಇದು ವಿವೇಚನೆಯಿಲ್ಲದೆ ಕೈಗೊಂಡ ನಿರ್ಧಾರವಾಗಿದೆ. ಸಿನಿಮಾ ನಿರ್ಮಿಸಲು ಎಷ್ಟೆಲ್ಲ ಶ್ರಮ, ಬಂಡವಾಳ ಬೇಕಾಗುತ್ತದೆ. ಅಂಕಿ ಅಂಶ ಸಂಗ್ರಹಿಸದೇ ಸರ್ಕಾರ ಸ್ವೇಚ್ಚೆಯ ನಿರ್ಧಾರ ತೆಗೆದುಕೊಂಡಿದೆ. ದರ ನಿಗದಿಪಡಿಸಲು ನಿಯಮ 55ರಡಿ ಅವಕಾಶವಿಲ್ಲ. ಟಿಕೆಟ್‌ದರ ಮಿತಿ ಆದೇಶಕ್ಕೆ ತಡೆ ನೀಡಬೇಕು ಎಂದು ನ್ಯಾಯಾಲಯಕ್ಕೆ ಕೋರಿದರು.
ಅರ್ಜಿದಾರರ ಪರ ವಾದ ಮಂಡಿಸಿದ ಮತ್ತೊಬ್ಬ ಹಿರಿಯ ನ್ಯಾಯವಾದಿ ಉದಯ್‌ಹೊಳ್ಳ, ಸರ್ಕಾರದ ದರ ನಿಗದಿಗೆ ಅಧಿಕಾರವಿಲ್ಲ. ಬೆಂಗಳೂರಿನಲ್ಲಿ ಭೂಮಿ ಬೆಲೆ ಎಷ್ಟಿದೆ ಎಂಬುದು ಎಲ್ಲರಿಗೂ ತಿಳಿದೇ ಇದೆ. ಹಾಗಿರುವಾಗ ಎರಡನೇ ಮತ್ತು ಮೂರನೇ ದರ್ಜೆ ನಗರಗಳಿಗೂ ಬೆಂಗಳೂರಿಗೂ ಒಂದೇ ದರ ನಿಗದಿಪಡಿಸಿದರೆ ಅದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಸರ್ಕಾರದ ಸಮರ್ಥನೆ: ಸರ್ಕಾರದ ಪರ ವಕೀಲರು, ಬಜೆಟ್‌ನಲ್ಲೇ ಸಿನಿಮಾ ಟಿಕೆಟ್‌ದರ ಮಿತಿ ಬಗ್ಗೆ ಘೋಷಿಸಲಾಗಿತ್ತು. ಕರಡು ಅಧಿಸೂಚನೆಗೆ ಆಕ್ಷೇಪಣೆ ಪರಿಗಣಿಸಿ ತೀರ್ಮಾನಿಸಲಾಗಿದೆ. ಸರ್ಕಾರಕ್ಕೆ ಟಿಕೆಟ್‌ದರ ನಿಗದಿಪಡಿಸುವ ಅಧಿಕಾರವಿದೆ ಎಂದು ವಾದ ಮಂಡಿಸಿದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪರವಾಗಿ ಹಿರಿಯ ವಕೀಲ ವಿ.ಲಕ್ಷ್ಮೀನಾರಾಯಣ್ ವಾದ ಮಂಡಿಸಿ, ಸರ್ಕಾರದ ತೀರ್ಮಾನವನ್ನು ಬೆಂಬಲಿಸಿ ಮಂಡಳಿ ಮಧ್ಯಂತರ ಅರ್ಜಿ ಸಲ್ಲಿಸಿದೆ. ಅದನ್ನು ಪರಿಗಣಿಸಿ ಮಂಡಳಿಯ ವಾದವನ್ನೂ ಸಹ ಆಲಿಸಬೇಕು, ಮಂಡಳಿಯ ಮನವಿ ಮೇರೆಗೆ ದರ ನಿಗದಿ ನಿರ್ಧಾರ ಕೈಗೊಂಡಿದೆ.

