ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭವಿಷ್ಯದಲ್ಲಿ ಬೆಂಗಳೂರಿಗೆ ಅತ್ಯುತ್ತಮ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಉತ್ತಮ ರಸ್ತೆಗಳನ್ನು ನಿರ್ಮಿಸಲು ಸರ್ಕಾರ ಮೊದಲ ಆದ್ಯತೆ ನೀಡಿದ್ದು, ಈ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ರಸ್ತೆ, ಪಾದಚಾರಿ ಮಾರ್ಗ ಸೇರಿ ಎಲ್ಲೆಡೆಯೂ ಶಿಸ್ತು ಹಾಗೂ ಏಕರೂಪತೆ ಸಾಧಿಸಬೇಕಿದೆ. ಇಲ್ಲದಿದ್ದರೆ ಬೆಂಗಳೂರಿಗೆ ನಾವುಗಳು ಮೋಸ ಮಾಡಿದಂತೆ. ಹಾಗಾಗಿ ಮೊದಲು ಉತ್ತಮ ರಸ್ತೆ ಜಾಲವನ್ನು ಅಭಿವೃದ್ಧಿಪಡಿಸಬೇಕಿದೆ ಎಂದು ಅವರು ತಿಳಿಸಿದ್ದಾರೆ.
ರಾಜಕಾರಣಿಗಳು, ಸ್ಥಳೀಯ ಸಂಸ್ಥೆಯ ಪ್ರತಿನಿಧಿಗಳು, ಇಂಜಿನಿಯರ್‌ಗಳು ಇಂದು ಅಧಿಕಾರದಲ್ಲಿ ಇರುತ್ತಾರೆ, ನಾಳೆ ಹೋಗುತ್ತಾರೆ. ಅಧಿಕಾರ ಸಿಕ್ಕಾಗ ಅವರದೇ ರೀತಿಯಲ್ಲಿ ಕೆಲಸ ಮಾಡುತ್ತಾರೆ. ಯಾರೂ ಇಲ್ಲದೆ ಇದ್ದರೂ ‘ನಮ್ಮರಸ್ತೆ‘ ಎನ್ನುವ ಕೈಪಿಡಿ ಕೆಲಸ ಮಾಡಲು ಮಾರ್ಗದರ್ಶನ ನೀಡುತ್ತದೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.