ಗೃಹ ಸಚಿವರನ್ನು ಭೇಟಿ ಮಾಡಿದ ಪೊಲೀಸ್ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪೊಲೀಸ್ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರನ್ನು ಸದಾಶಿವನಗರದ ಗೃಹ ಕಚೇರಿಯಲ್ಲಿ ಹೊಸ ವರ್ಷದ ಹಿನ್ನೆಲೆಯಲ್ಲಿ ಭೇಟಿ ಮಾಡಿ ಶುಭ ಕೋರಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಡಿಜಿಪಿ ಎಂ.ಎ.ಸಲೀಂ, ಮಾಲಿನಿ ಕೃಷ್ಣಮೂರ್ತಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ್, ಎಡಿಜಿಪಿಗಳಾದ ಆರ್.ಹಿತೇಂದ್ರ, ಹೇಮಂತ್ ನಿಂಬಾಳ್ಕರ್, ಅಲೋಕ್ ಕುಮಾರ್, ಸೀಮಂತ್ ಕುಮಾರ್ ಸಿಂಗ್, ಉಮೇಶ್, ಶರತ್‌ಚಂದ್ರ ಮುಂತಾದವರು ಇದ್ದರು‌.

ಇದೇ ಸಂದರ್ಭದಲ್ಲಿ ಪರಮೇಶ್ವರ್ ಅವರು ತಮ್ಮ ನಿವಾಸದಲ್ಲಿ ಪೊಲೀಸ್ ಉನ್ನತ ಮಟ್ಟದ ಅಧಿಕಾರಿಗಳಿಗೆ ಉಪಹಾರಕೂಟ ಏರ್ಪಡಿಸಿದ್ದರು.

ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಫೋಟೋ ಶೂಟ್ ಮಾಡಲಾಯಿತು. ಡಿಜಿಪಿ ಅಲೋಕ್ ಮೋಹನ್, ಪೊಲೀಸ್ ಆಯುಕ್ತ ದಯಾನಂದ್, ಹಿರಿಯ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್, ಹರಿಶೇಖರನ್, ಪ್ರಣವ್ ಮೊಹಂತಿ, ಅನುಚೇತ್, ದೇವರಾಜ್, ಅಲೋಕ್ ಕುಮಾರ್, ಮಾಲಿನಿ ಕೃಷ್ಣಮೂರ್ತಿ ಸೇರಿದಂತೆ ಹಲವರ ಜತೆ ಗ್ರೂಪ್ ಫೋಟೋ ತೆಗೆಸಿಕೊಂಡರು.

- Advertisement -  - Advertisement - 
Share This Article
error: Content is protected !!
";