ಹಿರಿಯೂರು ಹಾಗೂ ಹೊಳಲ್ಕೆರೆ ಅಂಗನವಾಡಿ ಕಾರ್ಯಕರ್ತೆರ ಆಯ್ಕೆ ಪಟ್ಟಿ ಪ್ರಕಟ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯೂರು ಹಾಗೂ ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.

ಮಾರ್ಚ್ 20 ರಂದು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯು ಅರ್ಜಿಗಳನ್ನು ಪರಿಶೀಲಿಸಿ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆಗೆ ಅನುಮೋದಿಸಿದೆ. ಹಿರಿಯೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಆಯ್ಕೆ ಪಟ್ಟಿಯನ್ನು

ಹಿರಿಯೂರು ನಗರದ ಹಳಿಯಾರು ರಸ್ತೆಯ ಸ್ತಿçà ಶಕ್ತಿ ಭವನ ಕಚೇರಿಯಲ್ಲಿ ಹಾಗೂ ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಆಯ್ಕೆ ಪಟ್ಟಿಯನ್ನು ಹೊಳಲ್ಕೆರೆ ಪಟ್ಟಣದ ಎನ್.ಹೆಚ್.-13 ರಸ್ತೆಯ, ಹರಿಕೃಪ ಬಿಲ್ಡಿಂಗ್ನಲ್ಲಿರುವ ಕಚೇರಿಯಲ್ಲಿ ಪ್ರಕಟಿಸಲಾಗಿದೆ.

ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಇದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ಏಪ್ರಿಲ್ 5 ಸಂಜೆ 5:30 ಒಳಗೆ ಸದರಿ ಕಚೇರಿಗಳಿಗೆ ಸಲ್ಲಿಸಬಹುದು. ನಂತರ ಬಂದ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

 

Share This Article
error: Content is protected !!
";