KSDLನಿಂದ ಐತಿಹಾಸಿಕ ಸಾಧನೆ-ಡಿಸಿಎಂ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
KSDLನಿಂದ ಐತಿಹಾಸಿಕ ಸಾಧನೆ : ಸರ್ಕಾರಕ್ಕೆ 135 ಕೋಟಿ ಲಾಭಾಂಶ ಚೆಕ್ ಹಸ್ತಾಂತರ ಮಾಡಲಾಯಿತು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 66ನೇ ಸಭೆ ಹಾಗೂ ಬಂಡವಾಳ ಹೂಡಿಕೆ ಉತ್ತೇಜನಕ್ಕೆ ಸಮಗ್ರ ಏಕಗವಾಕ್ಷಿ ವ್ಯವಸ್ಥೆ ಮತ್ತು ವ್ಯಾಪಾರ ಒಪ್ಪಿಗೆ ನೀಡಿಕೆ ವ್ಯವಸ್ಥೆಯ ಸರಳೀಕರಣ ಕುರಿತ ಸಭೆಯಲ್ಲಿ ಭಾಗವಹಿಸಲಾಯಿತು.
ಈ ಸಭೆಯಲ್ಲಿ ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳ ಚೆಕ್ ಅನ್ನು ಸರ್ಕಾರಕ್ಕೆ ಹಸ್ತಾಂತರಿಸಿತು.
KSDL ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ 1,700 ಕೋಟಿ ರೂಪಾಯಿ ವಹಿವಾಟು ನಡೆಸಿ, 451 ಕೋಟಿ ರೂ. ಲಾಭವನ್ನು ಕಂಡಿದೆ. ಇದರ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನು ಸರ್ಕಾರಕ್ಕೆ ಕೊಡಲಾಗಿದೆ. ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ಇದು ಸಾರ್ವಕಾಲಿಕ ದಾಖಲೆ ಎಂದು ಸಚಿವರಾದ ಎಂ.ಬಿ ಪಾಟೀಲರು ತಿಳಿಸಿದರು.
2022-23ರಲ್ಲಿ ಬಿಜೆಪಿ ಸರ್ಕಾರದಲ್ಲಿ ಸಂಸ್ಥೆಯ ವತಿಯಿಂದ ಸರ್ಕಾರಕ್ಕೆ 54 ಕೋಟಿ ರೂಪಾಯಿ ಡಿವಿಡೆಂಡ್ (ಲಾಭಾಂಶ) ಕೊಡಲಾಗಿತ್ತು. 2023-24ರಲ್ಲಿ108 ಕೋಟಿ ರೂ. ಲಾಭಾಂಶ ಹಸ್ತಾಂತರಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭಾಂಶದಲ್ಲಿಈಗ 27 ಕೋಟಿ ರೂ. ಹೆಚ್ಚಳವಾಗಿದ್ದು, ಮುಂಬರುವ ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಾಗಲಿದೆ. ಈ ಮೂಲಕ ಅಭಿವೃದ್ಧಿಯೇ ನಮ್ಮ ಮೊದಲ ಆದ್ಯತೆ ಎಂಬುದನ್ನು ನಾವು ಸಾಬೀತುಪಡಿಸಿದ್ದೇವೆ.

