ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಜಿಲ್ಲಾ ಕಂದಾಯ ಇಲಾಖೆ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಕೆ.ಪ್ರಾಣೇಶ್, ಗೌರವಾಧ್ಯಕ್ಷರಾಗಿ ಸದಾಶಿವಪ್ಪ, ಉಪಾಧ್ಯಕ್ಷರಾಗಿ ಇರ್ಫಾನ್, ಪ್ರಧಾನ ಕಾರ್ಯದರ್ಶಿಯಾಗಿ ಕೆ.ಶ್ರೀನಿವಾಸ್, ಖಜಾಂಚಿಯಾಗಿ ಉಮೇಶ್ ಎಲ್. ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸರ್ಕಾರಿ ನೌಕರರ ಭವನದಲ್ಲಿ ನಡೆದ ಸಭೆಯಲ್ಲಿ ಇವರುಗಳನ್ನು ಅವಿರೋಧ ಆಯ್ಕೆ ಮಾಡಲಾಯಿತು. ನಂತರ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು.