ಎಚ್‌ಎಂಪಿವಿ ಸೋಂಕು ಪತ್ತೆ, ಆತಂಕ ಬೇಡ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (
HMPV)ನ ಎರಡು ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಸ್ಪಷ್ಟಪಡಿಸಿದೆ.
ಮೊದಲ ಪ್ರಕರಣವು ಬೆಂಗಳೂರಿನಲ್ಲಿ 3 ತಿಂಗಳ ಹೆಣ್ಣು ಮಗುವಿನಲ್ಲಿ ಪತ್ತೆಯಾಗಿತ್ತು.

ಬ್ರಾಂಕೋಪ್ನ್ಯುಮೋನಿಯಾದೊಂದಿಗೆ ಆಸ್ಪತ್ರೆಗೆ ದಾಖಲಾದ ನಂತರ HMPV ರೋಗನಿರ್ಣಯ ಮಾಡಲಾಯಿತು. ಸಚಿವಾಲಯದ ಮಾಹಿತಿ ಪ್ರಕಾರ ಆಕೆಯನ್ನು ಡಿಸ್ಚಾರ್ಜ್ ಮಾಡಲಾಗಿದೆ. ಎರಡನೇ ಪ್ರಕರಣವು 8 ತಿಂಗಳ ಗಂಡು ಶಿಶುವಿನಲ್ಲಿ ಪತ್ತೆಯಾಗಿದ್ದು ಪ್ರಸ್ತುತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಯಾವುದೇ ಅಂತರರಾಷ್ಟ್ರೀಯ ಪ್ರಯಾಣದ ಇತಿಹಾಸವಿಲ್ಲದ ಎರಡು ಶಿಶುಗಳಿಗೂ ICMR ದೃಢಪಡಿಸಿದ್ದು ಆಕಂತಕಾರಿ ಬೆಳವಣಿಗೆಯಾಗಿದೆ.
ಕರ್ನಾಟಕದಲ್ಲಿ ಎರಡು
HMPV (ಹ್ಯೂಮನ್ ಮೆಟಾಪ್ನ್ಯೂಮೋವೈರಸ್) ಪ್ರಕರಣಗಳನ್ನು ಕೇಂದ್ರ ಆರೋಗ್ಯ ಸಚಿವಾಲಯವು ದೃಢಪಡಿಸಿದ ಕೆಲವೇ ಗಂಟೆಗಳ ನಂತರ, ಗುಜರಾತ್‌ನಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದೆ. ಎಬಿಪಿ ಅಸ್ಮಿತಾ ಪ್ರಕಾರ, ಗುಜರಾತ್‌ನಲ್ಲಿ ಇದು ಮೊದಲ ಎಚ್‌ಎಂಪಿವಿ ಪ್ರಕರಣವಾಗಿದೆ. ಸುಮಾರು 2 ವರ್ಷ ವಯಸ್ಸಿನ ಮಗುವಿನಲ್ಲಿ HMPV ವೈರಸ್ ಪತ್ತೆಯಾಗಿದೆ.

ರೋಗಿಯನ್ನು ಅಹಮದಾಬಾದ್‌ನ ಚಂದ್‌ಖೇಡಾ ಪ್ರದೇಶದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿವೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಮತ್ತು ಇಂಟಿಗ್ರೇಟೆಡ್ ಡಿಸೀಸ್ ಸರ್ವೆಲೆನ್ಸ್ ಪ್ರೋಗ್ರಾಂ (IDSP) ಮಾಹಿತಿ ಪ್ರಕಾರ, ಇನ್ಫ್ಲುಯೆನ್ಸ ತರಹದ ಅನಾರೋಗ್ಯ (ILI) ಅಥವಾ ತೀವ್ರ ಉಸಿರಾಟದ ಕಾಯಿಲೆ (SARI) ಪ್ರಕರಣಗಳಲ್ಲಿ ಯಾವುದೇ ಅಸಾಮಾನ್ಯ ಏರಿಕೆ ಕಂಡುಬಂದಿಲ್ಲ ಎಂದು ಅದು ಹೇಳಿದೆ. ಇಲಾಖೆಯು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿ ಯಾವುದೇ ತುರ್ತು ಪರಿಸ್ಥಿತಿ ಎದುರಾದರೆ ರಾಜ್ಯವು ಸನ್ನದ್ಧವಾಗಿದೆ ಎಂದು ಭರವಸೆ ನೀಡಿದೆ.

ಎಚ್ಚರ ಇರಲಿ-
ಸ್ವಯಂ-ಚಿಕಿತ್ಸೆ ಮಾಡಬೇಡಿ. ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಮುಚ್ಚಿಕೊಳ್ಳಿ. ನಿಮ್ಮ ಕೈಗಳನ್ನು ಸಾಬೂನು ಮತ್ತು ನೀರಿನಿಂದ ಅಥವಾ ಆಲ್ಕೋಹಾಲ್ ಆಧಾರಿತ ಹ್ಯಾಂಡ್ ಸ್ಯಾನಿಟೈಸರ್‌ನಿಂದ ತೊಳೆಯಿರಿ. ನೀವು ಅಸ್ವಸ್ಥರಾಗಿದ್ದರೆ ಕಿಕ್ಕಿರಿದ ಸ್ಥಳಗಳಲ್ಲಿ ಸಂಚರಸಬೇಡಿ ಮತ್ತು ಸಾರ್ವಜನಿಕರ ಸಂಪರ್ಕ ಕಡಿತ ಮಾಡಿ. ಆಗಾಗ್ಗೆ ಕಣ್ಣು
, ಮೂಗು ಮತ್ತು ಬಾಯಿಯನ್ನು ಮುಟ್ಟಬೇಡಿ. ನೀವು ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ ಮತ್ತು ಟಿಶ್ಯೂ ಪೇಪರ್ ಅನ್ನು ಮರುಬಳಕೆ ಮಾಡಬೇಡಿ ಎಚ್ಚರಿಸಲಾಗಿದೆ.

ರಾಜ್ಯ ಸರ್ಕಾರದ ಆದೇಶ-
ಎಚ್‌ಎಂಪಿವಿ ಸೋಂಕಿನ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ರಾಜ್ಯದಲ್ಲಿ ಎಚ್​​ಎಂಪಿವಿ ಕುರಿತು ಆತಂಕಪಡುವ ಅಗತ್ಯವಿಲ್ಲ. ಕೇಂದ್ರ ಸರ್ಕಾರ
, ಎನ್​ಸಿಡಿಸಿ ಜೊತೆ ಪರಿಸ್ಥಿತಿಯ ಸೂಕ್ಷ್ಮ ಮೇಲ್ವಿಚಾರಣೆ ನಡೆಸುತ್ತಿದೆ. ಚಳಿಗಾಲದ ಇತರೆ ಶ್ವಾಸಕೋಶ ಸೋಂಕಿನ ರೀತಿಯಲ್ಲಿಯೇ ಶೀತ ಮತ್ತು ಜ್ವರದ ಲಕ್ಷಣವನ್ನು ಎಚ್​ಎಂಪಿವಿ ವ್ಯಕ್ತಪಡಿಸುತ್ತದೆ ಎಂದು ತಿಳಿಸಿದೆ.

ಮಾಸ್ಕ್​ ಧರಿಸಿ, ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ ಅಥವಾ ಟಿಶ್ಯೂ ಪೇಪರ್​ ಬಳಕೆ ಮಾಡಿ. ಪದೇ ಪದೇ ಕೈಯನ್ನು ಸೋಪ್​ನಿಂದ ಅಥವಾ ಆಲ್ಕೋಹಾಲ್​ ಸ್ಯಾನಿಟೈಸರ್​ನಿಂದ ತೊಳೆಯಿರಿ. ನಿಮಗೆ ಹುಷಾರಿಲ್ಲದಿದ್ದರೆ, ಮನೆಯಲ್ಲಿ ಇರಿ ಮತ್ತು ಇತರರೊಂದಿಗೆ ಸೀಮಿತ ಸಂಪರ್ಕ ಸಾಧಿಸಿ, ಸಾಧ್ಯವಾದಷ್ಟು ನೀರು ಮತ್ತು ಪೋಷಕಾಂಶಯುಕ್ತ ಆಹಾರ ಸೇವಿಸಲು ಸೂಚನೆ ನೀಡಲಾಗಿದೆ.

ಈ ಕಾರ್ಯ ಮಾಡಬೇಡಿ:
ಒಮ್ಮೆ ಬಳಸಿದ ಕರವಸ್ತ್ರ ಮತ್ತು ಟಿಶ್ಯೂ ಮರುಬಳಕೆ ಮಾಡಬೇಡಿ. ಅನಾರೋಗ್ಯಕ್ಕೆ ಒಳಗಾದ ನಿಮ್ಮ ಹತ್ತಿರದವರ ಟವೆಲ್​, ಸೇರಿದಂತೆ ಇತರೆ ವಸ್ತುಗಳ ಬಳಕೆ ಬೇಡ. ಸಾರ್ವಜನಿಕ ಸ್ಥಳದಲ್ಲಿ ಉಗಿಯಬೇಡಿ. ವೈದ್ಯರ ಸಂಪರ್ಕಕ್ಕೆ ಒಳಗಾಗದೇ ಸ್ವಯಂ ಚಿಕಿತ್ಸೆ ಪಡೆಯದಂತೆ ಮಾರ್ಗಸೂಚಿಗಳನ್ನು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ.

 

- Advertisement -  - Advertisement - 
Share This Article
error: Content is protected !!
";