ಗೃಹ ಸಚಿವ ಪರಮೇಶ್ವರ್ ಒಡೆತನದ ಕಾಲೇಜ್ ಗಳ ಮೇಲೆ ಇಡಿ ದಾಳಿ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಒಡೆತನದ ತುಮಕೂರಿನಲ್ಲಿರುವ ಸಿದ್ದಾರ್ಥ ಶಿಕ್ಷಣ ಸಂಸ್ಥೆ
ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

- Advertisement - 

ಇಂದು ಬೆಳಗ್ಗೆಯಿಂದಲೇ ಇಡಿ ಅಧಿಕಾರಿಗಳು ಆಗಮಿಸಿ ಪರಿಶೀಲನೆ ಪ್ರಕ್ರಿಯೆ ಆರಂಭಿಸಿದ್ದಾರೆ. ಕಾಲೇಜು ಆವರಣದಲ್ಲಿ ದಾಖಲೆಪತ್ರಗಳ ಪರಿಶೀಲನೆ ನಡೆಯುತ್ತಿದೆ. 9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

- Advertisement - 

ತುಮಕೂರಿನ ಎಸ್ಎಸ್ಐಟಿ ಕಾಲೇಜು, ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ್ ಮೆಡಿಕಲ್ ಕಾಲೇಜು ಸೇರಿದಂತೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನೆಲಮಂಗಲದ ಟಿ. ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ನಾಲ್ಕು ವರ್ಷದ ಹಿಂದೆಯೂ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಾಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಬಳಿಕ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದ್ದನ್ನ ಸ್ಮರಿಸಬಹುದಾಗಿದೆ.

- Advertisement - 

 

Share This Article
error: Content is protected !!
";