ಹನಿಟ್ರ್ಯಾಪ್ ಆಯ್ತು ಈಗ ಕೊಲೆ ಸುಪಾರಿ!

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಹಕಾರ ಸಚಿವ ಕೆ.ಎನ್.ರಾಜಣ್ಣ
ಅವರು ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ಆಗಿದೆ ಎಂದು ಸದನದಲ್ಲಿ ತಮ್ಮ ಸಹಾಯಕತೆ ತೋಡಿಕೊಂಡು ತನಿಖೆಗೆ ಮನವಿ ಮಾಡಿದ್ದ ಬೆನ್ನಲ್ಲೇ ಈಗ ಅವರ ಸುಪುತ್ರ, ವಿಧಾನ ಪರಿಷತ್ ಸದಸ್ಯ  ರಾಜೇಂದ್ರ ರಾಜಣ್ಣ ಅವರು ತಮ್ಮ ಕೊಲೆಗೆ ಸುಪಾರಿ ನೀಡಲಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನವರೇ, ತಮ್ಮ ನಾಲಾಯಕ್ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರು, ಶಾಸಕರು, ಅವರ ಕುಟುಂಬ ಸದಸ್ಯರಿಗೆ ರಕ್ಷಣೆ ಇಲ್ಲದ ಮೇಲೆ ಇನ್ನು ಜನಸಾಮಾನ್ಯರ ಗತಿ ಏನು? ಎಂದು ಅಶೋಕ್ ಖಾರವಾಗಿ ಪ್ರಶ್ನಿಸಿದ್ದಾರೆ.

ಹಿರಿಯ ಸಚಿವರನ್ನ ಬೆದರಿಸಿ, ಬ್ಲಾಕ್ ಮೇಲ್ ಮಾಡಿ, ಅವರ ಬಾಯಿ ಮುಚ್ಚಿಸುವ ಉದ್ದೇಶದಿಂದ ಇವೆಲ್ಲ ನಡೆಯುತ್ತಿದೆ ಎನ್ನುವುದು ಸ್ಪಷ್ಟವಾಗಿದೆ. ಇದರ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆ ತನಿಖೆಯಾಗಲಿ, ಅಧಿಕಾರಕ್ಕಾಗಿ ಕರ್ನಾಟಕದ ರಾಜಕಾರಣವನ್ನ ಇಷ್ಟು ಕೀಳು ಮಟ್ಟಕ್ಕೆ ಕೊಂಡೊಯ್ಯುತ್ತಿರುವ ಆ ಖಳನಾಯಕ ಯಾರು ಎನ್ನುವುದು ಜನರಿಗೆ ಗೊತ್ತಾಗಲಿ ಎಂದು ಅಶೋಕ್ ಆಗ್ರಹ ಮಾಡಿದ್ದಾರೆ.

 

Share This Article
error: Content is protected !!
";