ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ದಾವಣಗೆರೆ ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮಟ್ಟದ ದೇಹರ್ಧಾಡ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿರುವ ಮಹಾರಾಜ ಮದಕರಿನಾಯಕ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ವರ್ಷದ ಬಿ.ಎ.ವಿದ್ಯಾರ್ಥಿ ರಾಜೇಶ್
ಹಾಗೂ ತೃತೀಯ ಸ್ಥಾನ ಪಡೆದಿರುವ ಪ್ರಥಮ ಬಿ.ಕಾಂ. ವಿದ್ಯಾರ್ಥಿ ಮಲ್ಲಿಕಾರ್ಜುನ್ ಇವರುಗಳಿಗೆ ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್.ಸಂದೀಪ್ ಶಾಲು ಹೊದಿಸಿ ಸನ್ಮಾನಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಿ.ರಂಗಸ್ವಾಮಿ ಮತ್ತು ಉಪನ್ಯಾಸಕರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

