ಪ್ರತಿಭಾವಂತ ಒಬಿಸಿ ವಿದ್ಯಾರ್ಥಿಗಳನ್ನು ಗೌರವಿಸುವುದು ಪ್ರಶಂಸಾರ್ಹ ಕಾರ್ಯ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್  ಸಂಸ್ಥೆಯು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದ ಪ್ರತಿಭಾವಂತ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುತ್ತಿರುವುದು ಪ್ರಶಂಸಾರ್ಹ ಕಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾಳಿದಾಸ ಹೆಲ್ತ್ ಎಜುಕೇಷನ್ ಮತ್ತು ಅಹಿಲ್ಯಾ ಟ್ರಸ್ಟ್‌ನವರು ಬೆಂಗಳೂರಿನ ವಸಂತ ನಗರದಲ್ಲಿರುವ ದೇವರಾಜ್ ಅರಸು ಭವನದಲ್ಲಿ ಆಯೋಜಿಸಿದ್ದ ಪ್ರೇರಣಾ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

- Advertisement - 

ಎಂಬಿಬಿಎಸ್ ಶಿಕ್ಷಣಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಿ ಪ್ರೋತ್ಸಾಹ ನೀಡಲಾಗುತ್ತಿದೆ. ಸಂಸ್ಥೆಯ ರೂವಾರಿಗಳು ಉತ್ತಮ ಸಾಮಾಜಿಕ ಕೆಲಸದಲ್ಲಿ ತೊಡಗಿಕೊಂಡಿರುವುದು ಅನುಕರಣೀಯವಾದುದು.

ವಿದ್ಯಾರ್ಥಿವೇತನ ಪಡೆಯುವ ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು. ಇಂದಿನ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಸ್ಥಾನಕ್ಕೇರಿದಾಗ, ಸಾಮಾಜಿಕ ಚಿಂತನೆಯಿಂದ ದುಡಿಯಬೇಕು. ತಾವು ಗಳಿಸುವ ಸಂಪತ್ತಿನ ಸಣ್ಣ ಪಾಲನ್ನು ಸಮಾಜದ ಒಳಿತಿಗಾಗಿ ಸದ್ಬಳಕೆ ಮಾಡಬೇಕು. ಆಗ ಪಡೆದ ಶಿಕ್ಷಣ ಸಾರ್ಥಕವಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

- Advertisement - 

2025ರ ಶೈಕ್ಷಣಿಕ ಸಾಲಿನ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಸರ್ಕಾರಿ ಖೋಟದಡಿ ಮೊದಲನೇ ವರ್ಷದ ಎಂಬಿಬಿಎಸ್ ಶಿಕ್ಷಣಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೇರಣಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿವಿ  ಮಾತು ಹೇಳಿದರು.

Share This Article
error: Content is protected !!
";