ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿರುವುದು ಒಂದು ಕಡೆ ಯಾದರೆ, ಮಂತ್ರಿ ಸ್ಥಾನಕ್ಕೆ ಕೋಟಿಗಟ್ಟಲೆ ಡೀಲ್ ಮಾಡಲಾಗುತ್ತಿದೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದರು.
ಆರಂಭದಲ್ಲಿ 50 ಕೋಟಿ ರೂಪಾಯಿ, ನಂತರ 75 ರಿಂದ 100 ಕೋಟಿ ರೂಪಾಯಿ ನೀಡಿ ಶಾಸಕರನ್ನು ಖರೀದಿಸಲಾಗುತ್ತಿದೆ . ತಮ್ಮದೇ ಪಕ್ಷದ ಶಾಸಕರನ್ನು ಖರೀದಿಸುವ ಸ್ಥಿತಿ ಕಾಂಗ್ರೆಸ್‌ನಲ್ಲಿ ಉದ್ಭವಿಸಿದೆ ಎಂದು ಅವರು ಆರೋಪಿಸಿದ್ದಾರೆ.
ಇನ್ನೂ ಎಐಸಿಸಿ ನಾಯಕ ಸುರ್ಜೇವಾಲಾ ಅವರು ಮಂತ್ರಿ ಸ್ಥಾನ ಬೇಕಾದವರಿಗೆ 200 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.
ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಈಗಾಗಲೇ ಮುಂಗಡ ಹಣ ನೀಡಿ ಬಂಧಿತರಾಗಿ ಜೈಲಿನಲ್ಲಿದ್ದಾರೆ ಎಂದು ಅವರು ಆರೋಪಿಸಿದರು. ಅಲ್ಲದೆ, ಈ ಕುರಿತು ಜಾರಿ ನಿರ್ದೇಶನಾಲಯಕ್ಕೆ (ಇಡಿ) ದೂರು ನೀಡುವುದಾಗಿ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ.

