ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಆಗಿದ್ದು ಹೇಗೆ?

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಲ್ಲಿಕಾರ್ಜುನ ಖರ್ಗೆ ಮಗನಾದ ಕಾರಣಕ್ಕೆ ಪ್ರಿಯಾಂಕ್ ಖರ್ಗೆ ಸಚಿವರಾದರು ಎನ್ನುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ನೀಡಿರುವ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿರುವ ಪ್ರಿಯಾಂಕ್ ಖರ್ಗೆ ಅವರು, ಹಾಗಾದರೆ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಹೇಗಾದರು
? ಎಂದು ಖಾರವಾಗಿ ಪ್ರಶ್ನಿಸಿದ್ದಲ್ಲದೆ ಆರ್​​ಎಸ್​​ಎಸ್​ನ ಎಷ್ಟು ಶಾಖೆ ಅಟೆಂಡ್​ ಮಾಡಿ ಅಧ್ಯಕ್ಷರಾದರು?. ಎಂದು ಪ್ರಿಯಾಂಕಾ ಖರ್ಗೆ ಖಾರವಾಗಿ ಪ್ರಶ್ನಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಗುರುವಾರ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಎಂಬ ಹೆಮ್ಮೆ ನನಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬಿಜೆಪಿಯವರಿಗೆ ಯಾಕೆ ಅವರ ಅಪ್ಪಂದಿರ ಬಗ್ಗೆ ಗೌರವ ಇಲ್ಲ ಬ್ಯಾಟ್​ ಹಿಡಿಯಲು ಬಾರದವರನ್ನು ಐಸಿಸಿ ಅಧ್ಯಕ್ಷರನ್ನಾಗಿ ಮಾಡಿದರು. ಅವರಾದರೆ ಹಾಗೆ ನೇಮಕವಾಗಬಹುದು. ನಾವೂ ಆದರೆ ಸೆಲೆಕ್ಟೆಡ್​ ಆಗಬೇಕಾ?. ಕುಟುಂಬ ರಾಜಕಾರಣದ ಬಗ್ಗೆ ಅವರು ಮಾತನಾಡುತ್ತಾರೆ. ಕುಟುಂಬ ರಾಜಕಾರಣ ಎಂಬುದು ನಮ್ಮಲ್ಲಿದ್ಯಾ ಅವರಲ್ಲಿದ್ಯಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ತೀಕ್ಷ್ಣವಾಗಿ ಪ್ರಶ್ನಿಸಿದರು.

ನನ್ನ ವಿರುದ್ಧ ಆಪಾದನೆ ಮಾಡುವುದಾದರೆ ದಾಖಲೆ ಸಮೇತವಾಗಿ ಮಾಡಲಿ. ಸಚಿನ್​ ಸಾವಿನ ಪತ್ರದಲ್ಲಿ ಎಲ್ಲಿಯೂ ನನ್ನ ಹೆಸರನ್ನು ಉಲ್ಲೇಖಿಸಿಲ್ಲ. ಬಿಜೆಪಿಗರು ಸುಖಾಸುಮ್ಮನೆ ನನ್ನ ಬಗ್ಗೆ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರ ಬಗ್ಗೆ ಸಚಿವರು ಗರಂ ಆದರು.

ನನ್ನ ವಿರುದ್ಧ ಬಿಜೆಪಿ ನಾಯಕರಾದ ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ, ಪಿ.ರಾಜೀವ್ ಸುಳ್ಳು ಆರೋಪ ಮಾಡಿ ಸುಳ್ಳಿನ ಶೂರರಾಗಿದ್ದಾರೆ.‌ಇವರ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಈ ಹಿಂದೆಯೇ ಹಾಕಿದ್ದೆ. ಅವರು ಹಿಟ್ ಆ್ಯಂಡ್​ ರನ್​ ಹೇಳಿಕೆ ನೀಡುವಲ್ಲಿ ಪಿಎಚ್‌ಡಿ ಪಡೆದಿದ್ದಾರೆ ಎಂದು ವಾಗ್ದಾಳಿ ಮಾಡಿದರು. ಕಲಬುರಗಿಯಲ್ಲಿ ನನ್ನ ವಿರುದ್ಧ ಮಣಿಕಂಠ ರಾಠೋಡ್​ ನೇತೃತ್ವದಲ್ಲಿ ಮುತ್ತಿಗೆ ಹಾಕಲು ಮುಂದಾಗುತ್ತಿದ್ದಾರೆ. ರಾಠೋಡ್ ವಿರುದ್ಧ 20-30 ಕೇಸ್ ಇದ್ದರೂ ಕ್ರಮ ಆಗಿಲ್ಲ. ಆತ ಈ ಹಿಂದೆ ನನಗೆ ಜೀವ ಬೆದರಿಕೆ ಕೂಡ ಹಾಕಿದ್ದ ಎಂಬ ಆಡಿಯೋವನ್ನು ಇದೇ ವೇಳೆ ಸಚಿವರು ಬಿಡುಗಡೆ ಮಾಡಿದರು. ಇದೀಗ ಆತನ ನೇತೃತ್ವದಲ್ಲಿ ಕಲಬುರಗಿ ಚಲೋ ಹಮ್ಮಿಕೊಂಡಿದ್ದಾರೆ.

ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಹೆಸರು ಉಲ್ಲೇಖವಿಲ್ಲ. ಇದಕ್ಕೂ ನನಗೆ ಸಂಬಂಧ ಇಲ್ಲ. ಆದರೂ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದೇ ವೇಳೆ ಬಿಜೆಪಿ ಸರ್ಕಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಬರೆದ ಡೆತ್ ನೋಟ್ ಓದಿದ ಪ್ರಿಯಾಂಕ್ ಖರ್ಗೆ ಅವರು, ಸಂತೋಷ್ ಪಾಟೀಲ್ ನನ್ನ ಸಾವಿಗೆ ನೇರ ಕಾರಣ ಕೆ.ಎಸ್.ಈಶ್ವರಪ್ಪ. ಅವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖ ಮಾಡಿದ್ದರು ಎಂದು ತಿಳಿಸಿದರು.‌

ಬಿಜೆಪಿ ನಾಯಕರು ನನ್ನ ರಾಜೀನಾಮೆಗೆ ಆಗ್ರಹಿಸಿ ಪತ್ರ ಬರೆದಿರುವ ಕುರಿತು ಮಾತನಾಡಿದ ಅವರು, ಸಂಪುಟದಲ್ಲಿ ಯಾರನ್ನು ಇಟ್ಟುಕೊಳ್ಳುವುದು, ಬಿಡುವುದು ಎಂಬುದು ಮುಖ್ಯಮಂತ್ರಿಗಳ ವಿಚಾರಕ್ಕೆ ಬಿಟ್ಟಿದ್ದು ಎಂದು ಸಚಿವರು ತಿರುಗೇಟು ನೀಡಿದರು.

 

 

- Advertisement -  - Advertisement - 
Share This Article
error: Content is protected !!
";