ಚಂದ್ರವಳ್ಳಿ ನ್ಯೂಸ್, ವಿಜಯನಗರ:
ಕಳೆದ ಮೂರ್ನಾಲ್ಕು ದಿನದಿಂದ ಸುರಿಯುತ್ತಿರುವ ಮಳೆಗೆ ಐದು ದಶಕಗಳ ನಂತರ ಹುಲಿಕೆರೆ ಗ್ರಾಮದ ಕೆರೆ ಕೋಡಿ ಬಿದ್ದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿರುವ ಹುಲಿಕೆರೆ ನೋಡಲು ಜನಸಾಗರವೇ ಹರಿದುಬಂದಿತ್ತು.
ಕಲ್ಯಾಣ ಚಾಲುಕ್ಯರ ಕಾಲಘಟ್ಟದಲ್ಲಿ ಕಟ್ಟಿಸಿದ ಕೆರೆಯು ಹುಲಿಕೆರೆ ಗ್ರಾಮ ಸೇರಿ ಸುತ್ತಮುತ್ತಲಿನ ಹತ್ತಾರು ಹಳ್ಳಿಯ ಜೀವನಾಡಿಯಾಗಿದೆ. ಕೆರೆ ಭರ್ತಿಯಾಗಿ ಕೋಡಿ ಬಿದ್ದಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ವಿಜಯನಗರದ ಹೊಸಪೇಟೆ ಪಟ್ಟಣ ಮಿನಿ ಮಲೆನಾಡಿನಂತಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇಡೀ ಹೊಸಪೇಟೆ ತಾಲೂಕು ಮಂಜಿನಿಂದ ಆವರಿಸಿದೆ.
ಐತಿಹಾಸಿಕ ಜೋಳದ ರಾಶಿ ಗುಡ್ಡ ಸೇರಿದಂತೆ ನಾನಾ ಕಡೆ ಮಂಜಿನ ವಾತಾವರಣ ಕ್ಕೆ ಜನರು ಫುಲ್ ಫಿದಾ ಆಗಿದ್ದಾರೆ. ಮಂಜಿನಲ್ಲೇ ಕುಳಿತು ಪ್ರಕೃತಿ ಸೌಂದರ್ಯ ಸವಿಯುತ್ತಿದ್ದಾರೆ.