ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವನ್ನು ಒದಗಿಸುವ ನಿಟ್ಟಿನಲ್ಲಿ 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಅಕ್ಟೋಬರ್ 4 ರಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಿಟ್ಟಿಂಗ್ಸ್ ನಡೆಸಲು ಉದ್ದೇಶಿಸಿರುತ್ತದೆ.
ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಸಂಬಂಧಿಸಿದಂತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಆಯಾ ಜಿಲ್ಲೆಯಲ್ಲಿ ಇತ್ಯರ್ಥಪಡಿಸಿ, ವಿಲೇ ಮಾಡಲು ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ. ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಗಳು ಈ ಸೌಲಭ್ಯದ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಲಾಗಿದೆ.
ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸದರಿ ಜಿಲ್ಲೆಯಲ್ಲಿಯೇ ಸಾರ್ವಜನಿಕರಿಂದ ದೂರುಗಳು / ಅಹವಾಲುಗಳನ್ನು ಸಹ ಸ್ವೀಕರಿಸಲು ಉದ್ದೇಶಿಸಲಾಗಿದೆ.
ಸಾರ್ವಜನಿಕರು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಿಗದಿತ ದಿನಾಂಕಗಳಂದು ಆಯೋಗದ ಮಾನ್ಯ ಹಂಗಾಮಿ ಅಧ್ಯಕ್ಷರು ಹಾಗೂ ಸದಸ್ಯರುಗಳನ್ನು ಸಂಪರ್ಕಿಸಿ, ದೂರುಗಳನ್ನು ಸಲ್ಲಿಸಬಹುದು ಎಂದು ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.