ಮಾನವ ಹಕ್ಕುಗಳ ಆಯೋಗ ಸಿಟ್ಟಿಂಗ್ಸ್: ಸಾರ್ವಜನಿಕರಿಂದ ದೂರು – ಅಹವಾಲು ಸ್ವೀಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:  
ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವನ್ನು ಒದಗಿಸುವ ನಿಟ್ಟಿನಲ್ಲಿ 1993 ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಅಕ್ಟೋಬರ್ 4 ರಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಿಟ್ಟಿಂಗ್ಸ್ ನಡೆಸಲು ಉದ್ದೇಶಿಸಿರುತ್ತದೆ. 

ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಸಂಬಂಧಿಸಿದಂತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಆಯಾ ಜಿಲ್ಲೆಯಲ್ಲಿ ಇತ್ಯರ್ಥಪಡಿಸಿ, ವಿಲೇ ಮಾಡಲು ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ. ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಗಳು ಸೌಲಭ್ಯದ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಲಾಗಿದೆ.

ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸದರಿ ಜಿಲ್ಲೆಯಲ್ಲಿಯೇ ಸಾರ್ವಜನಿಕರಿಂದ ದೂರುಗಳು / ಅಹವಾಲುಗಳನ್ನು ಸಹ ಸ್ವೀಕರಿಸಲು ಉದ್ದೇಶಿಸಲಾಗಿದೆ.

ಸಾರ್ವಜನಿಕರು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಿಗದಿತ ದಿನಾಂಕಗಳಂದು ಆಯೋಗದ ಮಾನ್ಯ ಹಂಗಾಮಿ ಅಧ್ಯಕ್ಷರು ಹಾಗೂ ಸದಸ್ಯರುಗಳನ್ನು ಸಂಪರ್ಕಿಸಿ, ದೂರುಗಳನ್ನು ಸಲ್ಲಿಸಬಹುದು ಎಂದು ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

- Advertisement -  - Advertisement - 
Share This Article
error: Content is protected !!
";