ಧರ್ಮಸ್ಥಳ ಭಾಗದಲ್ಲಿ ನೂರಾರು ಶವ ಹೂತಿರುವುದಾಗಿ ನ್ಯಾಯಾಲಯದಲ್ಲಿ ಹೇಳಿಕೆ!?

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ, ಸ್ಥಳೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳು ಮನುಷ್ಯನ ತಲೆಬರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆಯನ್ನು ಪ್ರಸಾರ ಮಾಡಿವೆ.

- Advertisement - 

ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ ಹೀಗೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಈ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗವು ರಾಜ್ಯ ಸರ್ಕಾರಕ್ಕೆ ಕೋರಿದ್ದು, ಅವರ ಕೋರಿಕೆಯ ಮೇರೆಗೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement - 

ವಿಶೇಷ ತನಿಖಾ ತಂಡವು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿದಂತೆ ಇದಕ್ಕೆ ಸಂಬಂಧಪಟ್ಟಂತೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಮಗ್ರ ತನಿಖೆ ನಡೆಸಿ, ವರದಿ ನೀಡಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 

- Advertisement - 

 

Share This Article
error: Content is protected !!
";