ನಾನು ಅಡ್ಜಸ್ಟ್​ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ಪ್ರತಿ ಪಕ್ಷದ ನಾಯಕ ನಾನೇ-ಯತ್ನಾಳ್

News Desk

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ನಾನು ಅಡ್ಜಸ್ಟ್​ಮೆಂಟ್ ರಾಜಕಾರಣಿ ಅಲ್ಲ, ಸದನದಲ್ಲಿ ನಿಜವಾದ ಪ್ರತಿ ಪಕ್ಷದ ನಾಯಕ ನಾನೇ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ತಿಳಿಸಿದರು.

ಸದನ ಆರಂಭವಾಗುತ್ತಿದ್ದಂತೆ ಪ್ರಶ್ನೋತ್ತರ ಕಲಾಪಕ್ಕೆ ಸ್ಪೀಕರ್ ಯು. ಟಿ. ಖಾದರ್ ಅವಕಾಶ ಕೊಟ್ಟರು. ಇದಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಕ್ಷೇಪಿಸಿ, ಎಲ್ಲವನ್ನೂ ಬದಿಗೊತ್ತಿ ಉತ್ತರ ಕರ್ನಾಟಕ ಭಾಗದ ಚರ್ಚೆ ಮಾಡುತ್ತೇವೆ ಅಂತಾ ಸಚಿವರೇ ಹೇಳಿದ್ದಾರೆ.

- Advertisement - 

 ಹೀಗಾಗಿ, ಉತ್ತರ ಕರ್ನಾಟಕ ಭಾಗದ ಬಗ್ಗೆ ಮೊದಲೇ ಚರ್ಚೆ ಮಾಡಬೇಕೆಂದು ಪಟ್ಟು ಹಿಡಿದರು‌. ಆಗ ಪ್ರಶ್ನೋತ್ತರ ಕಲಾಪಕ್ಕೆ ಆಡಳಿತ ಪಕ್ಷದ ಶಾಸಕ ರಂಗನಾಥ್ ಒತ್ತಾಯ ಮಾಡಿದರು.

ಇದೇ ವೇಳೆ, ಬಸನಗೌಡ ಯತ್ನಾಳ್ ಮಧ್ಯಪ್ರವೇಶಿಸಿ ಉ.ಕ. ಚರ್ಚೆಗೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ, ನಿಯಮದಂತೆ ಪ್ರಶ್ನೋತ್ತರ ಅವಧಿಗೆ ಅವಕಾಶ ನೀಡಿ ಬಳಿಕ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸೋಣ ಎಂದು ಮನವಿ ಮಾಡಿದರು.

- Advertisement - 

ಅಸಮಾಧಾನ:
ಸದನದಲ್ಲಿ ತಮ್ಮ ಕುರ್ಚಿ ಬದಲಾಯಿಸಿದ್ದಕ್ಕೆ ಶಾಸಕ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದರು. ನಾವೆಲ್ಲರೂ ಹಿರಿಯ ಶಾಸಕರು, ಆದರೆ ನಮ್ಮನ್ನು ಹಿಂದಕ್ಕೆ ಹಾಕಿದ್ದೀರಾ, ಇದು ಯಾವ ನ್ಯಾಯ? ಎಂದು ಪ್ರಶ್ನಿಸಿದರು.
ಬಿಜೆಪಿಯವರು ಯತ್ನಾಳ್ ಅವರನ್ನು ಅನಾಥರನ್ನಾಗಿ ಮಾಡಿದ್ದಾರೆ. ಅವರ ಜೊತೆ ನಾವು ನಿಲ್ಲುತ್ತೇವೆ ಎಂದು ಕಾಂಗ್ರೆಸ್ ಶಾಸಕ ರಂಗನಾಥ್ ಅವರು ಟಾಂಗ್ ನೀಡಿದರು.

ಸ್ಪೀಕರ್ ಯು. ಟಿ. ಖಾದರ್ ಅವರು ಇದಕ್ಕೆ ಸ್ಪಷ್ಟನೆ ನೀಡಿ ರಾಜಕೀಯದಲ್ಲಿ ಸೀನಿಯರ್, ಜೂನಿಯರ್ ಅಂತಿಲ್ಲ. ಅಧಿಕಾರದಲ್ಲಿ ಇದ್ದಾಗ ಸೀನಿಯರ್, ಇಲ್ಲದಿದ್ದಾಗ ಜ್ಯೂನಿಯರ್. ಶಾಸಕರ ಸಂಖ್ಯಾಬಲ ನೋಡಿಕೊಂಡು ಸೀಟು ಕೊಡುವುದು. ನಿಮಗೆ ಬೇಕಾದಾಗ ಇಲ್ಲಿ ಇರುತ್ತೀರಾ, ಬೇಡ ಅಂದಾಗ ಅಲ್ಲಿಗೆ ಹೋಗುತ್ತೀರಿ ಎಂದು ತಿಳಿಸಿದರು.

ಸಿಎಂ ಮನೆಗೆ ನಾನು ಹೋಗಿಲ್ಲ:
ಇದಕ್ಕೆ ಪ್ರತಿಕ್ರಿಯಿಸಿದ ಯತ್ನಾಳ್, ಬೇಕಾದಾಗ ಅಂತಾ ಅಲ್ಲ, ನಾನೊಬ್ಬ ನಿಷ್ಠಾವಂತ ಕಾರ್ಯಕರ್ತ. ಈ ಸದನದಲ್ಲಿ ನಿಜವಾದ ಪ್ರತಿಪಕ್ಷದ ನಾಯಕ ಅಂದರೆ ನಾನೇ. ನಾನು ಅಡ್ಜಸ್ಟ್​ಮೆಂಟ್ ರಾಜಕಾರಣಿ ಅಲ್ಲ. ನಾನೇನು ಸಿಎಂ ಮನೆಗೆ ಹೋಗಿಲ್ಲ. ಯಾರ ಮಂತ್ರಿಗಳ ಕಚೇರಿಗೂ ಹೋಗಿಲ್ಲ ಎಂದು ಹೇಳುತ್ತ ವಿಪಕ್ಷ ನಾಯಕ ಆರ್.ಅಶೋಕ್ ಎದುರಲ್ಲೇ, ನಾನೇ ನಿಜವಾದ ಪ್ರತಿಪಕ್ಷ ನಾಯಕ ಎಂದು ಪ್ರತಿಪಾದಿಸಿರುವುದು ಸದನದಲ್ಲಿ ಎಲ್ಲರ ಗಮನ ಸೆಳೆಯಿತು.

 

 

Share This Article
error: Content is protected !!
";